ಉಡುಪಿ : ಉಡುಪಿ ಜಿಲ್ಲೆಯನ್ನೇ ಬೆಚ್ಚಿಬಿಳಿಸಿದ್ದ ನೇಜಾರಿನ ತೃಪ್ತಿ ನಗರದಲ್ಲಿ ನಡೆದ ನಾಲ್ವರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಎಸ್ಪಿ ಇಂದು ಮಾಹಿತಿ ನೀಡಿದ್ದು, ಕೊಲೆಯಾದ ಗಗನಸಖಿ ಆಯ್ನಾಝ್ ಮತ್ತು ಹಂತಕ ಪ್ರವೀಣ್ ಗೆ 8 ತಿಂಗಳಿನಿಂದ ಪರಿಚಯವಿದ್ದು, .ಒಂದು ತಿಂಗಳಿಂದ ಸರಿಯಾಗಿ ಮಾತನಾಡದ ಕಾರಣ ಪೊಸೆಸಿವ್ ನೆಸ್ ನಿಂದ ಕೊಲೆ ಮಾಡಿದ್ದಾನೆ ಎಂದು ತಿಳಿಸಿದ್ದಾರೆ.
ಉಡುಪಿ ಮಾತನಾಡಿದ ಎಸ್‌ಪಿ ಡಾ. ಅರುಣ್ ಕೆ ಅವರು ತೃಪ್ತಿ ನಗರದಲ್ಲಿ ನಡೆದ ಕೊಲೆ ಪ್ರಕರಣ ಭೇದಿಸಲು ಒಟ್ಟು 11 ತಂಡ ರಚನೆ ಮಾಡಿದ್ದೆವು. ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ಎಲ್ಲಾ ಕಡೆಯಿಂದ ಮಾಹಿತಿ ಬಂದ ಕಾರಣ ಎಲ್ಲವನ್ನು ತನಿಖೆ ಮಾಡಿದ್ದೇವೆ. ನಾಲ್ವರ ಕೊಲೆ ಪ್ರಕರಣ ದೊಡ್ಡ ಸವಾಲಾಗಿತ್ತು. ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾದ ಪ್ರಕರಣ ಇದಾಗಿತ್ತು. ನಾವು ತಂಡವಾಗಿ ಕೆಲಸ ಮಾಡಿ ಆರೋಪಿಯನ್ನು ಬಂಧಿಸಿದ್ದೇವೆ. ಚಾರ್ಜ್ ಶೀಟ್ ಸಲ್ಲಿಕೆಗೆ ಇನ್ನೂ 70-80 ದಿನ ಇದೆ. ಎಲ್ಲಾ ಸಾಕ್ಷಿಗಳ ಸಂಗ್ರಹ ಮಾಡುತ್ತಿದ್ದೇವೆ. ಸುಮಾರು 50 ಪೊಲೀಸರು ಇದರ ಹಿಂದೆ ಕೆಲಸ ಮಾಡಿದ್ದಾರೆ ಎಂದರು.
ಹಸೀನಾ ಗೆ ಆರ್ಥಿಕ ಮೋಸವಾದ ಬಗ್ಗೆ ಮಾಹಿತಿ ಸಿಕ್ಕಿದೆ. ಕುಟುಂಬದಿಂದ ದೂರು ಪಡೆದುಕೊಂಡು ತನಿಖೆ ಮಾಡುತ್ತೇವೆ ಎಂದರು