ಉಡುಪಿ : ಮಂಗಳೂರಿನ ಲೋಕಾಯುಕ್ತ ಪೋಲಿಸ್ ವರಿಷ್ಠಾಧಿಕಾರಿ ನೇತೃತ್ವದ ತಂಡ ಸರ್ಚ್ ವಾರೆಂಟ್ ಆದೇಶದಂತೆ ಉಡುಪಿ ನೋಂದಣಿ ಕಚೇರಿಗೆ ಭೇಟಿ ನೀಡಿ ತನಿಖೆ ಕೈಗೊಂಡು ಪರಿಶೀಲನೆ ನಡೆಸಿದ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಉಡುಪಿ ಉಪನೋಂದಾವಣೆ ಕಚೇರಿ, ನಗರಾಭಿವೃದ್ಧಿ ಪ್ರಾಧಿಕಾರ, ತಾಲೂಕು ಕಚೇರಿಗಳಲ್ಲಿ ಭ್ರಷ್ಟಾ ಚಾರ ತಾಂಡವಾಡುತ್ತಿದೆ ಎಂದು ಇತ್ತೀಚೆಗೆ ವಕೀಲರೋಬ್ಬರು ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತರ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಅವರಿಗೆ ದೂರು ನೀಡಿದ್ದರು. ಈ ಹಿನ್ನಲೆ ಲೋಕಾಯುಕ್ತ ತಂಡ ಉಡುಪಿ ನೋಂದಣಿ ಕಚೇರಿಗೆ ಭೇಟಿ ನೀಡಿ ತನಿಖೆ ಕೈಗೊಂಡು ಪರಿಶೀಲನೆ ನಡೆಸಿದ್ದಾರೆ.
ಇತ್ತೀಚೆಗೆ ಉಡುಪಿ ಜಿಲ್ಲೆಗೆ ಭೇಟಿ ನೀಡಿದ್ದ ಉಪ ಲೋಕಾಯುಕ್ತರ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಅವರಿಗೆ ವಕೀಲರೊಬ್ಬರು ಉಡುಪಿ ನೋಂದಾಣಿ ಕಛೇರಿಯಲ್ಲಿ ಭ್ರಷ್ಟಚಾರ ನಡೆಯುತ್ತಿದೆ ಎಂದು ಮೌಖಿಕವಾಗಿ ದೂರು ನೀಡಿದ್ದರು. ಈ ಹಿನ್ನಲೆ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ರವರು ಉಡುಪಿ ನೋಂದಾಣಿ ಕಛೇರಿಯ ತನಿಖೆಗೆ ಸರ್ಚ್ ವಾರೆಂಟ್ ಅನ್ನು ಹೊರಡಿಸಿ ತನಿಖೆಗೆ ಮಂಗಳೂರು ವಿಭಾಗ ಲೋಕಾಯುಕ್ತ ಎಸ್.ಪಿ ಗೆ ಆದೇಶಿಸಿದ್ದರು ಎನ್ನಲಾಗಿದೆ.
ಮಂಗಳೂರಿನ ಲೋಕಾಯುಕ್ತ ಪೋಲಿಸ್ ವರಿಷ್ಠಾಧಿಕಾರಿ ನೇತೃತ್ವದ ತಂಡ ಸರ್ಚ್ ವಾರೆಂಟ್ ಆದೇಶದಂತೆ ಉಡುಪಿ ನೋಂದಣಿ ಕಚೇರಿಗೆ ಭೇಟಿ ನೀಡಿ ತನಿಖೆ ಕೈಗೊಂಡು ಪರಿಶೀಲಿಸಿದರು ಈ ಸಂದರ್ಭದಲ್ಲಿ ಯಾವುದೇ ಅವ್ಯವಹಾರಗಳು ಆಗದೇ ಇರುವುದು ಕಂಡುಬಂದಿತ್ತು. ಈ ಪರಿಶೀಲನೆ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ವಕೀಲರು ಹಾಜರಿದ್ದರು.