ಉತ್ತರ ಕನ್ನಡ ಧಾರವಾಡ ಲೋಕಸಭಾ ಚುನಾಚಣೆಯ ಫಲಿತಾಂಶ ಇಂದು (ಜೂನ್ 04) ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಬಹುತೇಕ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿಯಿದೆ.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಬಿಜೆಪಿಯಿಂದ ವಿಶೇಶ್ವರ ಹೆಗಡೆ ಕಾಗೇರಿ ಮತ್ತು ಕಾಂಗ್ರೆಸ್‌ನಿಂದ ಅಂಜಲಿ ನಿಂಬಾಳ್ಕರ್ ಸ್ಪರ್ಧಿಸಿದ್ದರು. ಇನ್ನು ಇಂದು ಫಲಿತಾಂಶದಲ್ಲಿ ಕೊನೆಗೂ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗೆಲುವು ಸಾಧಿಸುವ ಮೂಲಕ ಬಿಜೆಪಿ ಕೋಟೆಯನ್ನು ಭದ್ರಪಡಿಸಿಕೊಂಡಿದ್ದಾರೆ.