ಡೆಹ್ರಾಡೂನ್: ಉತ್ತರಾಖಂಡದ ಪಿಥೋರಗಢದಲ್ಲಿ ಭೂಕುಸಿತ ಉಂಟಾದ ಪರಿಣಾಮ ರಸ್ತೆ ಕೊಚ್ಚಿಹೋಗಿದ್ದು, 300 ಮಂದಿ ಪ್ರಯಾಣಿಕರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ ಲಖನ್‌ಪುರ ಬಳಿಯ ಧಾರ್ಚುಲದಿಂದ 45 ಕಿಮೀ ಎತ್ತರದ ಲಿಪುಲೇಖ್ – ತವಾಘಾಟ್ ರಸ್ತೆಗೆ ಬೆಟ್ಟ ಕುಸಿದು ಬಿದ್ದಿದ್ದು, 100 ಮೀಟರ್ ರಸ್ತೆ ಕೊಚ್ಚಿ ಹೋಗಿದೆ.
https://bcsuddi.com/%e0%b2%95%e0%b2%a1%e0%b2%ac-%e0%b2%b5%e0%b2%bf%e0%b2%a6%e0%b3%8d%e0%b2%af%e0%b3%81%e0%b2%a4%e0%b3%8d-%e0%b2%a6%e0%b3%81%e0%b2%b0%e0%b2%b8%e0%b3%8d%e0%b2%a4%e0%b2%bf-%e0%b2%b5%e0%b3%87%e0%b2%b3/
ಭೂಕುಸಿತದ ಪರಿಣಾಮ ಧಾರ್ಚುಲ ಮತ್ತು ಗುಂಜಿಯಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ. ಲಖನ್‌ಪುರ ಬಳಿ ಭೂಕುಸಿತದಿಂದಾಗಿ 100 ಮೀಟರ್ ರಸ್ತೆ ಕೊಚ್ಚಿಹೋಗಿದೆ. ಇದರಿಂದಾಗಿ ಸುಮಾರು 300 ಜನ ಪ್ರಯಾಣಿಕರು ಧಾರ್ಚುಲ ಮತ್ತು ಗುಂಜಿಯಲ್ಲಿ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಅಲ್ಲದೇ ಇನ್ನೆರಡು ದಿನಗಳಲ್ಲಿ ರಸ್ತೆ ಸಂಚಾರ ಮತ್ತೆ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ವರದಿಗಳು ಹೇಳಿವೆ.