ಡೆಹ್ರಾಡೂನ್: ಉತ್ತರಾಖಂಡದ ಮಾಜಿ ಸಿಎಂ ಹರೀಶ್ ರಾವತ್ ಅವರು ಹಲ್ದ್ವಾನಿಯಿಂದ ಕಾಶಿಪುರಕ್ಕೆ ಪ್ರಯಾಣಿಸುತ್ತಿದ್ದಾಗ ತಮ್ಮ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದಿದೆ ಎಂದು ಬುಧವಾರ ಹೇಳಿದ್ದಾರೆ. ವರದಿಗಳ ಪ್ರಕಾರ, ಹಲ್ದ್ವಾನಿಯಿಂದ ಕಾಶಿಪುರಕ್ಕೆ ಪ್ರಯಾಣಿಸುತ್ತಿದ್ದಾಗ ಹರೀಶ್ ರಾವತ್ ಅವರ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಅಪಘಾತವಾಗಿದೆ. ಪರಿಣಾಮ ರಾವತ್ ಅವರ ಎದೆಗೆ ಪೆಟ್ಟು ಬಿದ್ದಿದೆ. ಇನ್ನು ವೈಯಕ್ತಿಕ ಭದ್ರತಾ ಅಧಿಕಾರಿ (ಪಿಎಸ್ಒ) ಮತ್ತು ಇತರ ಸಹಚರರಿಗೂ ಗಾಯಗಳಾಗಿವೆ. ಅವರ ಕೈ ಮತ್ತು ತಲೆಗೆ ಗಾಯವಾಗಿದೆ ಎಂದು ಮೂಲಗಳು ತಿಳಿಸಿವೆ.