ಬೆಂಗಳೂರು: ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರರಷ್ಟು ಉದ್ಯೋಗ ಮೀಸಲಾತಿ ಕಡ್ಡಾಯಗೊಳಿಸುವ ಸಿಎಂ ಸಿದ್ದರಾಮಯ್ಯ ಅವರ ಟ್ವೀಟ್‌ಗೆ ಉದ್ಯಮಿಗಳಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ಡಿಲೀಟ್ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ ‘ಸಿ ಮತ್ತು ಡಿ’ ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ ಎಂದು ಟ್ವೀಟ್ ಮಾಡಿದ್ದರು.
ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿತ್ತು. ಇದನ್ನು ಸದನದಲ್ಲಿ ಮಂಡನೆ ಮಾಡುವುದು ಬಾಕಿ ಉಳಿದಿತ್ತು. ಆದರೆ ಇದಕ್ಕೂ ಮುನ್ನ ಉದ್ಯಮಿಗಳು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವಿರೋಧದ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಕನ್ನಡಿಗರ ನೇಮಕಾತಿ ಬಗ್ಗೆ ಮಾಡಿದ್ದ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ.
ಇನ್ನು ಸಿಎಂ ಸಿದ್ದರಾಮಯ್ಯ ಅವರ ಈ ನಡೆಯಿಂದ ನಾನಾ ಪ್ರಶ್ನೆಗಳು ಮೂಡಿದ್ದು, ಉದ್ಯಮಿಗಳ ಒತ್ತಡಕ್ಕೆ ಮಣಿದು ಸಿಎಂ ಟ್ವೀಡ್ ಡಿಲೀಟ್ ಮಾಡಿದ್ರಾ? ಅಥವಾ ಮಸೂದೆಯಲ್ಲಿ ಹೇಳಿರುವುದು ಹಾಗೂ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿರುವ ಮಾಹಿತಿ ಬೇರೆ ಬೇರೆ ಆಗಿದ್ಯಾ ಎಂಬ ಪ್ರಶ್ನೆ ಮೂಡಿದೆ.