ಚಿತ್ರದುರ್ಗ: ಹಿಂದುಳಿದ ವರ್ಗಗಳಿಗೆ ಸೇರಿದ ಉಪ್ಪಾರ ಮತ್ತು ಇದರ ಉಪಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿಗೆ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಸೇವಾಸಿಂಧು ತಂತ್ರಾAಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 16 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಉಪ್ಪಾರ ಅಭಿವೃದ್ಧಿ ನಿಗಮದಡಿಯಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಅರಿವು ಶೈಕ್ಷಣಿಕ ಸಾಲ ಯೋಜನೆ (ನೂತನ), ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ), ವಿದೇಶಿ ವ್ಯಾಸಂಗ ಯೋಜನೆ ಈ ಯೋಜನೆಯಡಿ ವಾರ್ಷಿಕ ವರಮಾನವು ರೂ.8 ಲಕ್ಷಗಳ ಮಿತಿಯಲ್ಲಿರಬೇಕು, ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ ಈ ಯೋಜನೆಯಲ್ಲಿ ಎಕರೆ ಜಮೀನು ಕನಿಷ್ಠ 2 ಎಕರೆ ಹೊಂದಿರಬೇಕು, ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು: ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವವರು ಸರ್ಕಾರದ ಆದೇಶದನ್ವಯ ಉಪ್ಪಾರ ಸಮುದಾಯ ಹಾಗೂ ಅದರ ಉಪಜಾತಿಗೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಚಾಲ್ತಿಯಲ್ಲಿರಬೇಕು. 18-55 ವರ್ಷಗಳ ವಯೋಮಿತಿ ಹೊಂದಿರಬೇಕು. ನಿಗಮ / ಸರ್ಕಾರದ ಯಾವುದಾದರೂ ಯೋಜನೆಗಳಡಿಯಲ್ಲಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.
ಅರಿವು ಯೋಜನೆಯಡಿ 18-30 ವರ್ಷ ವಯೋಮಿತಿಯೊಂದಿಗೆ, ವಾರ್ಷಿಕ ವರಮಾನ 3.50 ಲಕ್ಷ ಹೊಂದಿರಬೇಕು. ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರನು 21 ರಿಂದ 45 ವರ್ಷ ವಯೋಮಿತಿ ಹೊಂದಿರಬೇಕು. ಅರ್ಜಿದಾರನ ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಗ್ರಾಮಾಂತರ ಪ್ರದೇಶದಲ್ಲಿ ರೂ.98,000/ ಮತ್ತು ನಗರ ಪ್ರದೇಶದವರಿಗೆ ರೂ.1,20,000/ ಮೀರಿರಬಾರದು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5, ಹಾಗೂ ತೃತೀಯ ಲಿಂಗಿಗಳಿಗೆ ಶೇ.1 ರಷ್ಟು ಮೀಸಲಾತಿ ಇರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೆöÊಟ್ www.upparadevolopment.karnataka.gov.in ಅಥವಾ ನಿಗಮದ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ 080-22252555 ಗೆ ಅಥವಾ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.