ಬೆಂಗಳೂರು: ವಿದ್ಯಾರ್ಥಿಗಳು ಊಟ ಮಾಡುತ್ತಿದ್ದ ಸಂದರ್ಭ ಹಾಸ್ಟೆಲ್ ಸಿಬ್ಬಂದಿ ಇಲಿ ಪಾಷಾಣ ಸ್ಪ್ರೇ ಮಾಡಿದ ಪರಿಣಾಮ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹಾಸ್ಟೆಲ್ ಸಿಬ್ಬಂದಿ ಇಲಿ ಪಾಷಾಣ ಸ್ಪ್ರೇ ಮಾಡಿದ ಹಿನ್ನೆಲೆ ಊಟ ಮಾಡುತ್ತಿದ್ದ ನರ್ಸಿಂಗ್ ವಿದ್ಯಾರ್ಥಿಗಳು ಅದರ ವಾಸನೆಯಿಂದ ವಾಂತಿ ಮಾಡಿಕೊಮಡು ಅಸ್ವಸ್ಥಗೊಂಡಿದ್ದಾರೆ. ಖಾಸಗಿ ನರ್ಸಿಂಗ್ ಕಾಲೇಜಿಗೆ ಸೇರಿದ ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದ್ದು, ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ನರ್ಸಿಂಗ್ ಹಾಸ್ಟೆಲ್ ಕಟ್ಟಡದ ನೆಲ ಮಹಡಿಯಲ್ಲಿ ಊಟದ ಹಾಲ್ ಇದ್ದು, ವಿದ್ಯಾರ್ಥಿಗಳು ಊಟ ಮಾಡಲೆಮದು ಹಾಲ್ ಬಂದಿದ್ದಾರೆ. ಇದೇ ವೇಳೆಯೇ ಇಲಿ ಪಾಷಾಣ ಸ್ಪ್ರೇ ಮಾಡಲಾಗುತ್ತಿತ್ತು. ಇದರಿಂದ ಏನು ತೊಂದರೆ ಆಗುವುದಿಲ್ಲ ಎಂದು ಊಟ ಮುಗಿಸಿ ವಿದ್ಯಾರ್ಥಿಗಳು ತೆರಳಿದ್ದರು. ಆದರೆ ಸ್ವಲ್ಪ ಹೊತ್ತಿನಲ್ಲೇ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.