ಚಿತ್ರದುರ್ಗ: ಮೈಸೂರು ವಿಶ್ವವಿದ್ಯಾನಿಲಯದ 103ನೇ ಘಟಿಕೋತ್ಸವದಲ್ಲಿ ಚಿತ್ರದುರ್ಗ ನಗರದ ಸಿ.ಎಂ.ಚೈತನ್ಯ ಅವರು ಎಂ.ಕಾಂ ಪದವಿಯಲ್ಲಿ ಪ್ರಥಮ ರ್ಯಾಂಕ್ ಪಡೆದು ಮೂರು ಚಿನ್ನದ ಪದಕ ಹಾಗೂ ಎರಡು ನಗದು ಬಹುಮಾನ ಪಡೆದಿದ್ದಾರೆ.
ಸಿ.ಎಂ.ಚೈತನ್ಯ ಅವರು 2019-20ನೇ ಸಾಲಿನಲ್ಲಿ ಬಿ.ಕಾಂ.ಪದವಿಯಲ್ಲೂ ದಾವಣಗೆರೆ ವಿಶ್ವವಿದ್ಯಾಲಯದಿಂದ ಪ್ರಥಮ ರ್ಯಾಂಕಿನೊಂದಿಗೆ ಎರಡು ಚಿನ್ನದ ಪದಕ ಪಡೆದಿದ್ದರು. 2016-17ನೇಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ವಾಣಿಜ್ಯಶಾಸ್ತ್ರದಲ್ಲಿ ಚಿತ್ರದುರ್ಗ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದರು. ಸಿ.ಎಂ.ಚೈತನ್ಯ ಅವರ ತಂದೆ ಡಾ.ಸಿ.ಚನ್ನಕೇಶವ ಅವರು ಚಿತ್ರದುರ್ಗ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಸಹ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತಾಯಿ ಪಿ.ಕೆ.ಮಂಜುಳಾ ಅವರು ಚಿತ್ರದುರ್ಗದ ಮಾಳಪ್ಪನಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಫೋಟೋ ವಿವರ: ಮೈಸೂರು ವಿಶ್ವವಿದ್ಯಾನಿಲಯದ 103ನೇ ಘಟಿಕೋತ್ಸವದಲ್ಲಿ ಚಿತ್ರದುರ್ಗ ನಗರದ ಸಿ.ಎಂ.ಚೈತನ್ಯ ಅವರು ಎಂ.ಕಾಂ ಪದವಿಯಲ್ಲಿ ಪ್ರಥಮ ರ್ಯಾಂಕ್ ಪಡೆದು ಮೂರು ಚಿನ್ನದ ಪದಕ ಹಾಗೂ ಎರಡು ನಗದು ಬಹುಮಾನ ಮೈಸೂರು ವಿಶ್ವವಿದ್ಯಾಲಯ ಕುಲಪತಿಗಳಿಂದ ಸ್ವೀಕರಿಸಿದರು.