ನವದೆಹಲಿ:ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಸೋಮವಾರ ಜಾರಿ ನಿರ್ದೇಶನಾಲಯ ಬಂಧಿಸಿದೆ. ಏಜೆನ್ಸಿ ಅವರ ಮನೆ ಮೇಲೆ ದಾಳಿ ನಡೆಸಿ ಆರು ಗಂಟೆಗಳ ಕಾಲ ಗ್ರಿಲ್ ಮಾಡಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ಸೋಮವಾರ ಬೆಳಗ್ಗೆ, ಅಮಾನತುಲ್ಲಾ ಖಾನ್ ಅವರನ್ನು ಬಂಧಿಸಲು ಜಾರಿ ನಿರ್ದೇಶನಾಲಯ ಅಧಿಕಾರಿಗಳು ರಾಷ್ಟ್ರ ರಾಜಧಾನಿಯ ಓಖ್ಲಾದಲ್ಲಿರುವ ಅವರ ಮನೆಗೆ ಬಂದಿದ್ದಾರೆ ಎಂದು ಎಕ್ಸ್‌ನಲ್ಲಿ ಖಾನ್ ಬರೆದುಕೊಂಡಿದ್ದರು.
ಖಾನ್ X ನಲ್ಲಿ ವೀಡಿಯೊ ಹೇಳಿಕೆಯನ್ನು ಹಂಚಿಕೊಂಡಿದ್ದರು. ಅದರಲ್ಲಿ ED ತಂಡವು ಅವರನ್ನು ಬಂಧಿಸಲು ಯೋಜಿಸಿದೆ ಎಂದು ಹೇಳಿದ್ದಾರೆ. “ಶೋಧನೆಯ ನೆಪದಲ್ಲಿ ಇಡಿ ತಂಡ ನನ್ನನ್ನು ಬಂಧಿಸಲು ಬಂದಿದೆ. ನನಗೆ ಮತ್ತು ಆಪ್ ನಾಯಕರಿಗೆ ಕಿರುಕುಳ ನೀಡಲು ಅವರು ಈ ರೀತಿ ಮಾಡುತ್ತಿದ್ದಾರೆ. ಪ್ರಾಮಾಣಿಕವಾಗಿ ಜನರ ಸೇವೆ ಮಾಡುವುದು ಅಪರಾಧವೇ? ಈ ಸರ್ವಾಧಿಕಾರ ಎಷ್ಟು ದಿನ ಉಳಿಯುತ್ತದೆ? ಎಂದು ಆಕ್ರೋಶ ಹೊರಹಾಕಿದ್ದರು.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ