ಬೆಂಗಳೂರು: ಮೂರು ಮಂದಿ ರಾಜಕೀಯ ನಾಯಕರು ನನ್ನ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಎಚ್ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ ಹಾಗೂ ಬಿ.ಎಲ್ ಸಂತೋಷ ನನ್ನ ತೇಜೋವಧೆ ನಡೆಸುತ್ತಿದ್ದಾರೆ.
ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಮ್ಮ ಕುಟುಂಬದಿಂದ ಯಾವುದೇ ಅಕ್ರಮ ಆಗಿಲ್ಲ. ಕಾನೂನು ವ್ಯಾಪ್ತಿ ಮೀರಿ ನಾವು ಏನು ಎಲ್ಲೂ ಮಾಡಿಲ್ಲ. ವಾಲ್ಮೀಕಿ ನಿಗಮ ಪ್ರಕರಣದಲ್ಲೂ ಸರ್ಕಾರದಿಂದ ಯಾವುದೇ ತಪ್ಪು ಆಗಿಲ್ಲ. ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷಗಳ ನಾಯಕರು ಸರ್ಕಾರಕ್ಕೆ ಹಾನಿ ಮಾಡಲು ಯತ್ನಿಸುತ್ತಿದ್ದಾರೆ. ಈ ವಿಚಾರದಲ್ಲಿ ಶಾಸಕರಿಗೆ ಯಾವುದೇ ಅನುಮಾನ ಬೇಡ ಎಂದರು. ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು ಮತ್ತು ಸಚಿವರು ವಿಧಾನಸಭೆ ಕಲಾಪದಲ್ಲಿ ಕಡ್ಡಾಯವಾಗಿ ಹಾಜರಾಗಬೇಕು.
ಸದನದಲ್ಲಿ ನಾವು ಒಗ್ಗಟ್ಟಾಗಿ ಹೋರಾಟ ಮಾಡಬೇಕಿದೆ. ಇಷ್ಟು ದಿನ ರಕ್ಷಣಾತ್ಮಕವಾಗಿ ನಡೆದುಕೊಂಡಿದ್ದು ಸಾಕು. ಇನ್ನು ಮುಂದೆ ಆಕ್ರಮಣಕಾರಿಯಾಗಿ ವರ್ತನೆ ಮಾಡಬೇಕಿದೆ. ಇಷ್ಟರವರೆಗೆ ಬಿಜೆಪಿ ಹೇಳಿದ್ದನ್ನು ಕೇಳಿಕೊಂಡು ಕುಳಿತಿದ್ದೇವೆ. ಇನ್ನು ಮುಂದೆ ನೇರ ಬಿಜೆಪಿಗೆ ಟಕ್ಕರ್ ಕೊಡಬೇಕು ಎಂದು ಹೇಳಿದ್ದಾರೆ.