ಬೆಂಗಳೂರು: ಕಿಡ್ನಾಪ್ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್ ಶಾಸಕ ಎಚ್.ಡಿ ರೇವಣ್ಣಗೆ ಜಾಮೀನು ಮಂಜೂರಾಗಿದೆ.
ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅವರು ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸಂತೋಷ್ ಗಜಾನನ ಭಟ್ ಅವರಿದ್ದ ಪೀಠವು, ರೇವಣ್ಣಗೆ ಷರತ್ತುಬದ್ಧ ಜಾಮೀನು ನೀಡಲು ಗ್ರೀನ್ ಸಿಗ್ನಲ್ ನೀಡಿದ್ದು, ₹5 ಲಕ್ಷ ಬಾಂಡ್ ನೀಡಬೇಕು. ಸಾಕ್ಷ್ಯಗಳನ್ನು ನಾಶಮಾಡಬಾರದು ಎಂದು ಸೂಚನೆ ನೀಡಿದೆ. ಹಾಗಾಗಿ ರೇವಣ್ಣ ನಾಳೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.
ಕಿಡ್ನಾಪ್ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್ ಶಾಸಕ ಎಚ್.ಡಿ ರೇವಣ್ಣಗೆ ಷರತ್ತುಬದ್ಧ ಜಾಮೀನು ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ನ್ಯಾ.ಸಂತೋಷ್ ಗಜಾನನ ಭಟ್ ಅವರಿದ್ದ ಪೀಠವು, ರೇವಣ್ಣಗೆ ಈ ಜಾಮೀನಿಗಾಗಿ ಕೆಲವು ಷರತ್ತುಗಳನ್ನು ವಿಧಿಸಿದೆ.
ಅದರಲ್ಲಿ ಇಬ್ಬರ ಶೂರಿಟಿ, ₹5 ಲಕ್ಷ ಬಾಂಡ್ ನೀಡಬೇಕು, ಸಾಕ್ಷ್ಯಗಳನ್ನು ನಾಶಮಾಡಬಾರದು, SIT ತನಿಖೆಗೆ ಸಹಕರಿಸಬೇಕು ಹಾಗೂ KR ತಾಲೂಕು ಪ್ರವೇಶ ಮಾಡುವಂತಿಲ್ಲ ಎಂದು ಖಡಕ್ ಸೂಚನೆ ನೀಡಿದೆ.