‘ಎನ್‌ಡಿಎ ಸರ್ಕಾರ ಶೀಘ್ರದಲ್ಲೇ ಪತನವಾಗಲಿದೆ’- ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ತಪ್ಪಾಗಿ ರಚನೆಯಾಗಿದ್ದು, ಶೀಘ್ರದಲ್ಲೇ ಅದು ಪತನವಾಗಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖರ್ಗೆ ಭವಿಷ್ಯ ನುಡಿದಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿಯವರ ಬಹುಮತವಿಲ್ಲದ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು. ಪ್ರಮಾದದಿಂದ ಎನ್‌ಡಿಎ ಸರಕಾರ ರಚನೆಯಾಗಿದ್ದು, ಅದು ಯಾವಾಗ ಬೇಕಾದರೂ ಪತನವಾಗಬಹುದು ಎಂದು ಹೇಳಿದರು.

ತಪ್ಪಾಗಿ ಎನ್‌ಡಿಎ ಸರ್ಕಾರ ರಚನೆಯಾಗಿದೆ. ಮೋದಿಜಿಗೆ ಜನಾದೇಶವಿಲ್ಲ. ಇದು ಅಲ್ಪಸಂಖ್ಯಾತ ಸರ್ಕಾರ. ಈ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು ಎಂದು ಅವರು ತಿಳಿಸಿದರು.

Advertisement

ಬಿಜೆಪಿ ತನ್ನ ಮೈತ್ರಿ ಪಕ್ಷಗಳನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿದೆ ಎಂಬ ಊಹಾಪೋಹದ ಕೆಲವು ದಿನಗಳಿಂದ ಹರಿದಾಡುತ್ತಿದೆ. ಈ ಉಹಾಪೋಹದ ಬೆನ್ನಲ್ಲೇ ಖರ್ಗೆ ಅವರ ಈ ಹೇಳಿಕೆ ಕುತೂಹಲ ಮೂಡಿಸಿದೆ.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement