ಆಂಧ್ರಪ್ರದೇಶ: ವಿಜಯನಗರ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಎರಡು ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತರ ಸಂಖ್ಯೆ 11ಕ್ಕೆ ಏರಿದೆ. 50ಕ್ಕೂ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ರಕ್ಷಣಾ ಕಾರ್ಯ ಮುಂದಿವರಿದ ಕಾರಣ 12 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ, 15 ಮಾರ್ಗಗಳನ್ನು ಬದಲಾಯಿಸಲಾಗಿದೆ ಮತ್ತು 7 ಇತರ ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ ಎಂದು ಪೂರ್ವ ಕರಾವಳಿ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಯಾಣಿಕರು ಆ ಪ್ರದೇಶದಲ್ಲಿ ಸಿಕ್ಕಿಹಾಕಿಕೊಳ್ಳದಂತೆ ಬಸ್ ವ್ಯವಸ್ಥೆಯನ್ನು ಮಾಡಿದ್ದೇವೆ. ಹಳಿಗಳನ್ನು ಭಾಗಶಃ ಸರಿಪಡಿಸಲಾಗಿದೆ. ಘಟನೆಯ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.