ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆಯಲ್ಲಿ ನಕಲು ತಡೆಯಲು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ಮಹತ್ವದ ಕ್ರಮ ಕೈಗೊಂಡಿದ್ದು, ಆಯಾ ಜಿಲ್ಲೆಗಳಿಂದ ಪರೀಕ್ಷಾ ಕೇಂದ್ರಗಳನ್ನು ರಚಿಸಿ, ಜಿಲ್ಲಾವಾರು ಪರೀಕ್ಷಾ ಕೇಂದ್ರಗಳ ಕರಡು ಪಟ್ಟಿ ರಚಿಸಲಾಗಿದೆ.
ಶಾಲೆಗಳು ಹೊಂದಿರುವ ಮೂಲ ಸೌಕರ್ಯ ಪರಿಶೀಲಿಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರಗಳನ್ನು ರಚಿಸಬೇಕು ಹಾಗೂ ಈ ಬಗ್ಗೆ ಕೇತ್ರ ಶಿಕ್ಷಾಣಾಧಿಕಾರಿಗಳು ಪರಿಶೀಲಿಸಿ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಬೇಕು.
ಅಲ್ಲದೆ ಪರೀಕ್ಷಾ ಕೇಂದ್ರದ ಪ್ರತಿ ಕೊಠಡಿಗೆ 24 ವಿದ್ಯಾರ್ಥಿಗಳಂತೆ ಆಸನ ವ್ಯವಸ್ಥೆ ಮಾಡಿ ಪರೀಕ್ಷಾ ಕೇಂದ್ರಗಳನ್ನು ರಚಿಸುವುದು. ಜತೆಗೆ ಸಿಸಿಟಿವಿ ಪರೀಕ್ಷಾ ದಿನದಲ್ಲಿ 24 ಗಂಟೆಯೂ ಕೆಲಸ ನಿರ್ವಹಿಸುವಂತಿರಬೇಕು ಸೇರಿದಂತೆ ಹಲವಾರು ನಿರ್ದೇಶನಗಳನ್ನು ನೀಡಲಾಗಿದೆ.