ಚಿತ್ರದುರ್ಗ: ಎಸ್ಸಿ, ಎಸ್ಟಿಗೆ ವಿಶೇಷ ಅನುದಾನವನ್ನು ನೀಡುತ್ತೇವೆ. ಇಡೀ ದೇಶದಲ್ಲಿ ಜಾತಿ ಗಣತಿಯನ್ನ ಜಾರಿ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ನಗರದ ಹಳೇ ಮಾಧ್ಯಮಿಕ ಶಾಲಾ ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಡುಗೊಲ್ಲ ಸಮಾಜವನ್ನು ಎಸ್ಟಿಗೆ ಸೇರಿಸಲಾಗುತ್ತದೆ. ರೈತರಿಗೆ ಬೆಂಬಲ ಬೆಲೆ, ಕೃಷಿಗೆ GST ಮುಕ್ತಗೊಳಿಸ್ತೇವೆ. ಭೂಮಿ ಇಲ್ಲದವರಿಗೆ ಭೂಮಿ ನೀಡುತ್ತೇವೆ. ಬೆಳೆ ನಷ್ಟವಾದವರಿಗೆ 30 ದಿನದಲ್ಲಿ ವಿಮೆ ಹಣ ಕೊಡುತ್ತೇವೆ. ದೇಶದ ಸಂವಿಧಾನ, ರೈತರ ಉಳುವಿಗೆ ಕಾಂಗ್ರೆಸ್ ಬೆಂಬಲಿಸಿ ಎಂದು ಹೇಳಿದ್ದಾರೆ. ಮೋದಿ ಸರ್ಕಾರದಲ್ಲಿ ಕೇವಲ ಸುಳ್ಳಿನ ಕಂತೆಯೇ ಇದೆ ಎಂದು ಕಿಡಿಕಾರಿದ್ದಾರೆ.!

































