ರಾಮನಗರ: ಎಸ್.ಟಿ.ಸೋಮಶೇಖರ್ ಬಿಜೆಪಿಯಲ್ಲಿ ದೊಡ್ಡ ಫಲಾನುಭವಿ. ಆದರೆ ಈಗ ಡಿಕೆ ಶಿವಕುಮಾರ್ ಜೊತೆಗಿನ ಸಂಬಂಧ ಇಟ್ಕೊಂಡು ನಮ್ಮ ಪಕ್ಷವನ್ನು ಟೀಕಿಸುತ್ತಿದ್ದಾರೆ. ಅವರು ಪಕ್ಷ ಬಿಡುವುದಾದರೆ ವಿರೋಧವಿಲ್ಲ ಎಂದು ಮಾಜಿ ಸಚಿವ ಸಿಪಿ ಯೋಗೆಶ್ವರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹುಶಃ ಎಸ್.ಟಿ.ಸೋಮಶೇಖರ್ ಎಂಎಲ್ಎ ಸ್ಥಾನಕ್ಕೆ ರಾಜಿನಾಮೆ ಕೊಟ್ಟರೆ ಮಾಜಿ ಶಾಸಕ ಆಗಬಹುದು ಇನ್ನೇನು ಆಗಲು ಸಾಧ್ಯವಿಲ್ಲ. ಒಂದು ವೇಳೆ ಹೊರಹೋಗುವ ತೀರ್ಮಾನ ಮಾಡಿದ್ದರೆ ನಮ್ಮ ವಿರೋಧವಿಲ್ಲ, ಸ್ವಾಗತಿಸುತ್ತೇವೆ ಎಂದರು.
ಇನ್ನು ಪದೇ ಪದೇ ಪಕ್ಷಕ್ಕೆ ಮಾಡುವುದು ನಮಗೂ ನೋವು ತರುತ್ತದೆ. ಅಧಿಕಾರವಿದ್ದಾಗ ಅನುಭವಿಸಿ ಇಂದು ಪಕ್ಷದ ವಿರುದ್ಧ ಮಾತನಾಡುವುದು ಶೋಭೆಯಲ್ಲ ಎಂದು ಹೇಳಿದ್ದಾರೆ.