ಬೆಂಗಳೂರು : ದ್ವಿತೀಯ ಪಿಯು ಉತ್ತರ ಪತ್ರಿಕೆಗಳ ಮೌಲ್ಯಮಾಪನವು ಬಹುತೇಕ ಮುಕ್ತಾಯಗೊಂಡಿದ್ದು, ಇದೇ ಏ. 10ಕ್ಕೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಯಾರಿ ನಡೆಸಿದೆ.
ಮಾರ್ಚ್ 1ರಿಂದ ಪ್ರಾರಂಭವಾದ ಪರೀಕ್ಷೆ ಮಾರ್ಚ್ 22ರ ವರೆಗೆ ರಾಜ್ಯದ 1,124 ಪರೀಕ್ಷಾ ಕೇಂದ್ರದಲ್ಲಿ ನಡೆದಿದ್ದವು. ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆಗೆ 6.98 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ ಶೇಕಡ 98ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಇನ್ನು ಈಗಾಗಲೇ ಕಲಾ, ವಾಣಿಜ್ಯ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾಗಿದೆ. ವಿಜ್ಞಾನ ವಿಷಯಗಳ ಮೌಲ್ಯಮಾಪನ ಏ.5 ರ ಒಳಗೆ ಸಂಪೂರ್ಣವಾಗಲಿದ್ದು, ಏ. 10ಕ್ಕೆ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆ ಇದೆ.