ಬೆಂಗಳೂರು: ಕಳೆದ ವಾರ ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಸುರಿದು ತಂಪು ವಾತಾವರಣ ಹಬ್ಬಿತ್ತು. ಅದಾದ ಮೇಲೆ ಮತ್ತೆ ಬಿಸಿಲಿನ ವಾತಾವರಣ ಕಾಣಿಸಿಕೊಂಡಿದೆ.
ಈ ವಾರದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಏಪ್ರಿಲ್ 18 ಮತ್ತು 19ರಂದು ರಾಜ್ಯದ ಎಲ್ಲಾ ಜಿಲ್ಲೆಗಳು ಅಂದರೆ 31 ಜಿಲ್ಲೆಗಳಲ್ಲೂ ಭಾರತೀಯ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಸೂಚನೆ ನೀಡಿದೆ.
ಈ ಸಂದರ್ಭದಲ್ಲಿ ಪ್ರತಿ ಗಂಟೆಗೆ 30ರಿಂದ 40 km ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಬಳ್ಳಾರಿ, ಚಿಕ್ಕಮಗಳೂರು, ಹಾಸನ ಕೊಡಗು ಹಾಗೂ ಮೈಸೂರು ಜಿಲ್ಲೆಗಳ ಕೆಲವು ಭಾಗದಲ್ಲಿ ಮಂಗಳವಾರ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡು ಹಾಗೂ ಮಲೆನಾಡು ಭಾಗದ ಕೆಲವು ಪ್ರದೇಶಗಳಲ್ಲಿ ಬುಧವಾರ ಮಳೆ ಆಗಲಿದೆ ಎಂದು ತಿಳಿಸಿದೆ. ಈ ಸಂದರ್ಭದಲ್ಲಿ ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 22° ಸೆಲ್ಸಿಯಸ್ ಇರಲಿ ಎಂದು ತಿಳಿಸಿದೆ


































