ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 3 ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡ ಬಳಿಕ, ಪರೀಕ್ಷಾ ಅಭ್ಯರ್ಥಿಗಳು ವೈಯಕ್ತಿಕ ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಮತ್ತು pue.kar.nic ನಲ್ಲಿ ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ.
ಅಭ್ಯರ್ಥಿಗಳು ತಮ್ಮ ಫಲಿತಾಂಶ ಪರಿಶೀಲಿಸಲು, ಪಿಯು ಬೋರ್ಡ್ ಬಿಡುಗಡೆ ಮಾಡಿದ karresults.nic.in ಅಥವಾ pue.kar.nic ಎಂಬ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ, ವೆಬ್‌ಸೈಟ್‌ನ ಮುಖಪುಟದಲ್ಲಿ KSEAB PUC ಫಲಿತಾಂಶ 2024 ಎಂಬ ಲಿಂಕ್ ಕ್ಲಿಕ್ ಮಾಡಬೇಕು. ಬಳಿಕ ಅಭ್ಯರ್ಥಿಗಳ ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸಿದರೆ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2024 ಎಂಬ ಸಂದೇಶ ಸ್ಕ್ರೀನ್ ಮೇಲೆ ಕಾಣಿಸುತ್ತದೆ. ನಂತರ ಸ್ಕೋರ್‌ಕಾರ್ಡ್ ಅನ್ನು ವೀಕ್ಷಿಸಬಹುದಾಗಿದೆ ಹಾಗೂ ಡೌನ್‌ಲೋಡ್ ಕೂಡ ಮಾಡಿಕೊಳ್ಳಬಹುದಾಗಿದೆ.