ಬೆಂಗಳೂರು: ನಗರದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸಂಜೆ ನಂತರ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂಪಾಯಿ ನಗದು ಜಪ್ತಿ ಮಾಡಿದ್ದಾರೆ. ಏಕಕಾಲದಲ್ಲಿ ಆರ್ಟಿ ನಗರದ ಎರಡು ಸ್ಥಳಗಳ ಮೇಲೆ ಐಟಿ ದಾಳಿ ನಡೆದಿದ್ದು, ಆತ್ಮಾನಂದ ಕಾಲೋನಿಯ ಫ್ಲಾಟ್ ಒಂದರ ಕೊಠಡಿಯಲ್ಲಿದ್ದ ಮಂಚದಡಿ ಬಚ್ಚಿಟ್ಟಿದ್ದ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ.
ಫ್ಲಾಟ್ನಲ್ಲಿ ಬರೊಬ್ಬರಿ 23 ಬಾಕ್ಸ್ಗಳಲ್ಲಿ 500 ಮುಖಬೆಲೆಯ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ. ಕಾರಿನಲ್ಲಿ ಹಣ ಸಾಗಾಟ ಮಾಡಲು ತಯಾರಾಗಿತ್ತು ಎಂದು ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಪೊಲೀಸ್ ಸಿಬ್ಬಂದಿಗಳ ಭದ್ರತೆಯಲ್ಲಿ ಐಟಿ ಅಧಿಕಾರಿಗಳು ಏಕಕಾಲದಲ್ಲಿ ಆರ್ಟಿ ನಗರದ ಎರಡು ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ.
ಆತ್ಮಾನಂದ ಕಾಲೋನಿಯ ಒಂದು ಫ್ಲಾಟ್ನ ಕೊಠಡಿಯೊಂದರ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಮಂಚದಡಿ ಪರಿಶೀಲನೆ ನಡೆಸಿದಾಗ ಕೋಟ್ಯಂತರ ರೂಪಾಯಿ ಪತ್ತೆಯಾಗಿದೆ. ಪತ್ತೆಯಾದ ಹಣದ ಒಟ್ಟಾರೆ ಮೊತ್ತ ಎಣಿಕೆ ಮಾಡಿದ ಐಟಿ ಅಧಿಕಾರಿಗಳು, ಬಳಿಕ ಮಾಜಿ ಕಾರ್ಪೋರೇಟರ್ ಮನೆ ಬಾಗಿಲು ತಟ್ಟಿದ್ದಾರೆ.