ನವದೆಹಲಿ: ‘ಒಂದು ರಾಷ್ಟ್ರ ಒಂದು ಚುನಾವಣೆ’ ಬಗ್ಗೆ ಚರ್ಚಿಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯನ್ನು ಕೇಂದ್ರ ಸರ್ಕಾರ ಶುಕ್ರವಾರ ರಚಿಸಿದೆ.
ಕೇಂದ್ರ ಸರ್ಕಾರವು ಸೆಪ್ಟೆಂಬರ್ 18 ರಿಂದ 22 ರವರೆಗೆ ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಇನ್ನು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಯು ದೇಶಾದ್ಯಂತ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವುದನ್ನು ಉಲ್ಲೇಖಿಸುತ್ತದೆ.
ಸಂಸತ್ತಿನ ವಿಶೇಷ ಅಧಿವೇಶನವು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಒಂಬತ್ತು ವರ್ಷಗಳಲ್ಲಿ ಮೊದಲ ವಿಶೇಷ ಅಧಿವೇಶನವಾಗಿದೆ.