ನವದೆಹಲಿ: ಕೇಂದ್ರ ಸರ್ಕಾರ ಇತ್ತೀಚೆಗೆ ಪ್ರಸ್ತಾಪಿಸಿರುವ ಒಂದು ರಾಷ್ಟ್ರ, ಒಂದು ಚುನಾವಣೆಯ ಉದ್ದೇಶ ಒಳ್ಳೆಯದಿದ್ದರೆ ಬೆಂಬಲ ನೀಡುತ್ತೇನೆ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ದೇಶದಲ್ಲಿ ಈ ಹಿಂದೆಯೂ ಇಂತಹ ಚುನಾವಣಾ ಪದ್ಧತಿ ಜಾರಿಯಲ್ಲಿತ್ತು. ಏಕಕಾಲದಲ್ಲಿ ಚುನಾವಣೆ ನಡೆದರೆ ಸಮಯ ಮತ್ತು ಹಣ ಉಳಿತಾಯವಾಗುತ್ತದೆ. ಜೊತೆಗೆ 5 ವರ್ಷದ ಅಧಿಕಾರವಧಿಯಲ್ಲಿ ಸರ್ಕಾರ ಪದೇ-ಪದೇ ಚುನಾವಣೆಗಳನ್ನ ಎದುರಿಸುವ ಗೋಜಲು ತಪ್ಪಿಸಬಹುದು ಎಂದರು.
ಇನ್ನು ಒಂದು ರಾಷ್ಟ್ರ ಒಂದು ಚುನಾವಣೆ ಪರಿಕಲ್ಪನೆ ಭಾರತದಂತಹ ದೊಡ್ಡ ದೇಶದಲ್ಲಿ ಅನುಷ್ಠಾನಕ್ಕೆ ತರಲು ಸಾಧ್ಯವೇ ಎಂಬುದನ್ನು ಗಮನಿಸಬೇಕು ಎಂದಿದ್ದಾರೆ.
ಒಂದು ರಾಷ್ಟ್ರ-ಒಂದು ಚುನಾವಣೆ ಪರಿಕಲ್ಪನೆಗೆ ಐಎನ್‌ಡಿಐಎ ಒಕ್ಕೂಟ ವಿರೋಧ ವ್ಯಕ್ತಪಡಿಸಿದ್ದು, ಹಲವು ನಾಯಕರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.