ಚೆನ್ನೈ : ಕೇಂದ್ರ ಸರ್ಕಾರ ದ ‘ಒಂದು ರಾಷ್ಟ್ರ ಒಂದು ಚುನಾವಣೆ ಡಿಲಿಮಿಟೇಶನ್ ವಿರುದ್ಧ ಬುಧವಾರ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಲಾಗಿದೆ.
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ವಿಧಾನಸಭೆಯಲ್ಲಿ ಎರಡು ನಿರ್ಣಯಗಳನ್ನು ಮಂಡಿಸಿದರು. ಒಂದು ‘ಒಂದು ರಾಷ್ಟ್ರ, ಒಂದು ಚುನಾವಣೆ’ನೀತಿಯ ವಿರುದ್ಧ ಮತ್ತು ಎರಡನೆಯದು ಹೊಸ ಜನಗಣತಿಯ ಆಧಾರದ ಮೇಲೆ ಡಿಲಿಮಿಟೇಶನ್ ವಿರುದ್ಧ ನಿರ್ಣಯ ಮಂಡಿಸಿದ್ದಾರೆ.
‘ಒಂದು ರಾಷ್ಟ್ರ, ಒಂದು ಚುನಾವಣೆ’ ಎಂಬುದು ಕೇಂದ್ರ ಸರ್ಕಾರದ ಪ್ರಸ್ತಾವನೆವಾಗಿದ್ದು, ಲೋಕಸಭೆ ಮತ್ತು ಎಲ್ಲಾ ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಗುರಿ ಹೊಂದಿದೆ. ಈ ಪ್ರಸ್ತಾವನೆಯು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯ ಪರಿಶೀಲನೆಯಲ್ಲಿದೆ.
ಈ ಕುರಿತು ಇಂದು ರಾಜ್ಯ ವಿಧಾನಸಭೆಯಲ್ಲಿ ಮಾತನಾಡಿದ ಸ್ಟಾಲಿನ್, ಒಂದು ರಾಷ್ಟ್ರ, ಒಂದು ಚುನಾವಣಾ ನೀತಿಯನ್ನು ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಜಾಪ್ರಭುತ್ವದ ತಳಹದಿಯ ವಿರುದ್ಧವಾಗಿದ್ದು, ಅಪ್ರಾಯೋಗಿಕವಾಗಿದೆ. ಇದನ್ನು ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಲಾಗಿಲ್ಲ. ಹೀಗಾಗಿ ಇದನ್ನು ಜಾರಿಗೆ ತರಬಾರದು ವಿಧಾನಸಭೆಯು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತದೆ ಎಂದು ತಿಳಿಸಿದರು.
ಹೊಸ ಜನಗಣತಿಯ ಆಧಾರದ ಮೇಲೆ ಕ್ಷೇತ್ರಗಳ ವಿಂಗಡಣೆಯ ಉದ್ದೇಶಿತ ಕಾರ್ಯಾಚರಣೆ ವಿರುದ್ಧ ಎರಡನೇ ನಿರ್ಣಯವನ್ನು ಮಂಡಿಸಿದರು. ತಮಿಳುನಾಡು ತನ್ನ ಕಡಿಮೆ ಜನಸಂಖ್ಯೆಯ ಗಾತ್ರವನ್ನು ಗಮನಿಸಿದರೆ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯಗಳಿಗೆ ಹೋಲಿಸಿದರೆ ಲೋಕಸಭೆಯಲ್ಲಿ ಸೀಮಿತ ಪ್ರಾತಿನಿಧ್ಯವನ್ನು ಹೊಂದಿರುತ್ತದೆ ಎಂದು ತಮ್ಮ ಆತಂಕ ವ್ಯಕ್ತಪಡಿಸಿದರು.
ಜನಗಣತಿ ಆಧಾರದ ಮೇಲೆ ಡಿಲಿಮಿಟೇಶನ್ ಮಾಡುವುದರಿಂದ ಜನಸಂಖ್ಯಾ ನಿಯಂತ್ರಣ ನೀತಿಗಳನ್ನು ಜಾರಿಗೆ ತರಲು ಆಸಕ್ತಿ ತೋರದ ರಾಜ್ಯಗಳು ಹೆಚ್ಚಿನ ಲಾಭವನ್ನು ಪಡೆಯುತ್ತವೆ. ಇದನ್ನು ನಾವು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದರು. ಇದನ್ನು ನಾವು ವಿರೋಧಿಸಬೇಕು. 2026ರ ನಂತರ ಜನಗಣತಿಯ ಆಧಾರದ ಮೇಲೆ ನಡೆಸಲಾಗುವ ಡಿಲಿಮಿಟೇಶನ್ ಪ್ರಕ್ರಿಯೆಯನ್ನು ನಡೆಸಬಾರದು ಎಂದು ಈ ಸದನವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತದೆ ಎಂದರು.
ಅಲ್ಲದೆ ತಮಿಳುನಾಡಿನಲ್ಲಿ 39 ಲೋಕಸಭಾ ಸ್ಥಾನಗಳಿವೆ, ಡಿಲಿಮಿಟೇಶನ್ ಮಾಡಿದರೆ, ನಮ್ಮ ಲೋಕಸಭಾ ಸ್ಥಾನಗಳ ಸಂಖ್ಯೆ ಕಡಿಮೆಯಾಗುತ್ತದೆ. ಸಂಸತ್ತಿನಲ್ಲಿ ನಮ್ಮ ಬೇಡಿಕೆಗಳನ್ನು ಕೇಳುವುದಿಲ್ಲ. ಅದನ್ನು ಕೆಳಗಿಳಿಸಿದರೆ ಅದು ನಮ್ಮ ಮೇಲೆ ಗಂಭೀರ ಪರಿಣಾಮ ಬೀರಬಹುದು ಎಂದು ಆತಂಕ ವ್ಯಕ್ತಪಡಿಸಿದರು.