ಮಂಡ್ಯ-ಬೆಂಗಳೂರು: ಉಪ ರಾಷ್ಟ್ರಪತಿ ಜಗದೀಪ್ ಧನಕರ್‌ರವರು ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡ್ರು ಶ್ರೀ ಆದಿಚುಂಚನಗಿರಿ ಕ್ಷೇತ್ರದ ವಿಶ್ವವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪ್ರಮುಖರಿಬ್ಬರೂ ಭಾರತದ ಸಮಗ್ರ ಅಭಿವೃದ್ಧಿ, ಮುನ್ನಡೆಯ ಕುರಿತು ವಿದ್ಯಾರ್ಥಿಗಳ ಜತೆ ವಿಸ್ತೃತವಾಗಿ ಚರ್ಚೆ ನಡೆಸಿದರು. ಎಲ್ಲಾ ಕ್ಷೇತ್ರಗಳಲ್ಲಿಯೂ ಭಾರತದ ಸಮಗ್ರವಾಗಿ ಸ್ವಾವಲಂಬನೆ ಸಾಧಿಸಬೇಕು ಎಂದು ಇಬ್ಬರೂ ಅಗ್ರಗಣ್ಯರು ಪ್ರತಿಪಾದಿಸಿದರು. ಕಾರ್ಯಕ್ರಮದ ನಂತರ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಒಂದೇ ಹೆಲಿಕಾಪ್ಟರ್‌ನಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಇನ್ನು ಕರ್ನಾಟಕ ಪ್ರವಾಸದಲ್ಲಿರುವ ಉಪ ರಾಷ್ಟ್ರಪತಿಯವರು ಇಂದು ಪದ್ಮನಾಭ ನಗರದಲ್ಲಿರುವ ಮಾಜಿ ಪ್ರಧಾನಿ ನಿವಾಸಕ್ಕೆ ಭೇಟಿ ಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನಿಖಿಲ್ ಕುಮಾರಸ್ವಾಮಿ ಅವರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಇನ್ನು ಉಪ ರಾಷ್ಟ್ರಪತಿ ಧನಕರ್‌ರವರು, ಶ್ರೀಮತಿ ಚನ್ನಮ್ಮ ದೇವೇಗೌಡ ಅವರ ಆರೋಗ್ಯ ವಿಚಾರಿಸಿದರು.
