ಹೊಸಪೇಟೆ ; ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನ ವಿವಿಧ ಯೋಜನೆಗಳ ಅಡಿಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ವಿಜಯನಗರ ಜಿಲ್ಲಾ ವ್ಯವಸ್ಥಾಪಕ ಕೆ. ಭೀಮಪ್ಪ ಅವರು ತಿಳಿಸಿದ್ದಾರೆ.
ಹಿಂದುಳಿದ ವರ್ಗಗಳ ಪ್ರವರ್ಗ-3ಎ ಅಡಿಯಲ್ಲಿ ಬರುವ ಒಕ್ಕಲಿಗ ಸಮುದಾಯಕ್ಕೆ ಸೇರಿದ ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್‌ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ, ಹಳ್ಳಿಕಾರ್, ಕುಂಚಿಟಿಗ, ಕಾಪು, ಹೆಗ್ಗಡೆ, ಕಮ್ಮ, ರಡ್ಡಿ, ಗೌಂಡರ್, ನಾಮಧಾರಿ ಗೌಡ ಹಾಗೂ ಉಪ್ಪಿನ ಕೊಳಗ ಸಮುದಾಯಕ್ಕೆ ಸೇರಿದ ಅರ್ಜಿದಾರರು ವಿವಿಧ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಶೈಕ್ಷಣಿಕ ಸಾಲ ಯೋಜನೆ, ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಸ್ವಾತಂತ್ರö್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಸ್ವಯಂ ಉದ್ಯೋಗ ಸಾಲ ಯೋಜನೆ ಸೌಲಭ್ಯ ಪಡೆಯಲುಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಗ್ರಾಮಒನ್ https://gramaone.karnataka.gov.in ಹಾಗೂ ಕರ್ನಾಟಕ ಒನ್ https://k1app.karnataka.gov.in ಅಮೃತ ಮುನ್ನಡೆ ಯೋಜನೆಗೆ ಕೌಶಲ್ಯ ಕರ್ನಾಟಕ ತಂತ್ರಾAಶ https://www/kaushalkar.com ಮೂಲಕ ಅ.30ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kvcdc.karnataka.gov.in ಭೇಟಿ ನೀಡಬಹುದು. ಅಥವಾ ಹೊಸಪೇಟೆ ತಾಲ್ಲೂಕು ಕಚೇರಿಯ ಮೊದಲನೇ ಮಹಡಿ ಕೊಠಡಿ ಸಂಖ್ಯೆ 4ರಲ್ಲಿರುವ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಭೇಟಿ ನೀಡಬಹುದು. ದೂ.08394-267038.