ಚಿತ್ರದುರ್ಗ: ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಪಡೆಯಲು ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊಯನ ದಿನ. ಶೈಕ್ಷಣಿ ಸಾಲ ಯೋಜನೆಗೆ ಕೊನೆಯ ದಿನ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ https://kvcdc.karnataka.gov.in ಅಥವಾ ನಿಗಮದ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ 08194-220882 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಇ.ಸಂಪತ್ಕುಮಾರ್ ತಿಳಿಸಿದ್ದಾರೆ.