ಭುವನೇಶ್ವರ: ಒಡಿಶಾದಲ್ಲಿ ಆಡಳಿತಾರೂಢ ಬಿಜೆಡಿಗೆ ಭಾರೀ ಹಿನ್ನಡೆಯಾಗಿದೆ. 147 ಸದಸ್ಯ ಬಲದ ವಿಧಾನಸಭೆ ಚುನಾವಣೆಯ ಮತ ಎಣಿಕೆ ಜೋರಾಗಿ ನಡೆದಿದ್ದು, ಬಿಜೆಪಿ 72 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಮ್ಯಾಜಿಕ್ ನಂಬರ್ ತಲುಪಲು ಇನ್ನೇರಡು ಸ್ಥಾನಗಳ ಅಗತ್ಯವಿದೆ. ಇತ್ತೀಚಿನ ವರದಿಯ ಪ್ರಕಾರ, ಭಾರತೀಯ ಜನತಾ ಪಕ್ಷ (ಬಿಜೆಪಿ) 72 ವಿಧಾನಸಭಾ ಕ್ಷೇತ್ರ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜು ಜನತಾ ದಳ (ಬಿಜೆಡಿ) 57 ಸ್ಥಾನ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) 15 ಸ್ಥಾನ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ( ಮಾರ್ಕ್ಸ್‌ವಾದಿ) 1 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ, ಪಕ್ಷೇತರ ಅಭ್ಯರ್ಥಿಗಳು 2 ಸ್ಥಾನಗಳಲ್ಲಿ ಮುನ್ನಡೆ ಪಡೆದುಕೊಂಡಿದ್ದಾರೆ.
