ಕಾಶ್ಮೀರ: ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿ ಓರ್ವ ಭಯೋತ್ಪಾದಕನನ್ನು ಭಾರತೀಯ ಸೇನೆ ಹೊಡೆದುರುಳಿಸಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ.
ಭಯೋತ್ಪಾದಕರು ಜಿಲ್ಲೆಯ ದೆಗ್ವಾರ್ ಸೆಕ್ಟರ್‌ನಲ್ಲಿ ಒಳನುಸುಳಲು ಯತ್ನಿಸುವ ವೇಳೆ ಗಡಿ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿದ್ದ ಸೇನಾ ಪಡೆ ಎಚ್ಚರಿಕೆ ನೀಡಿದರೂ ಧಿಕ್ಕರಿಸಿ ಮುನ್ನುಗಿದ ನುಸುಳುಕೋರನನ್ನು ಸೇನಾಪಡೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದೆ.
ಇನ್ನು ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಕಡೆಯಿಂದ ನಿಯಂತ್ರಣ ರೇಖೆಯೊಳಗೆ ನುಸುತ್ತಿದ್ದ ಇಬ್ಬರು ಭಯೋತ್ಪಾದಕರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿಯಲ್ಲಿ ನಡೆದಿದ್ದು ಓರ್ವ ಸೇನೆಯ ಗುಂಡಿನ ದಾಳಿಗೆ ಮೃತಪಟ್ಟರೆ ಇನ್ನೋರ್ವನಿಗೆ ಗುಂಡೇಟು ತಗುಲಿದ್ದು ಆತನ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ.