ಔಷಧಿ ಖರೀದಿಗೆಂದು ಮೆಡಿಕಲ್ ಗೆ ಬರುವಾಗಲೇ ಹೃದಯಘಾತ

ಮೈಸೂರು: ಈ ಹೃದಯ ಎನ್ನುವುದು ಯಾವ ಕ್ಷಣದಲ್ಲಿ ಆಘಾತಕ್ಕೆ ಒಳಗಾಗುತ್ತದೆ ಎಂದು ಅಂದಾಜಿಸಲೂ ಸಾಧ್ಯವಿಲ್ಲ. ನಿಂತ ನಿಲುವಿನಲ್ಲೇ ಬದುಕನ್ನು ಸ್ತಬ್ಧಗೊಳಿಸುವ ನಿರ್ನಾಮ ಶಕ್ತಿಯನ್ನು ಅದು ಹೊಂದಿದೆ. ಕುಳಿತಲ್ಲೇ ಕುಸಿಯುವುದು, ನಿಂತಲ್ಲೇ ಉರುಳಿಬೀಳುವುದು, ಮಲಗಿದಲ್ಲೇ ಮರಣಿಸುವುದು, ನೃತ್ಯ ಮಾಡುತ್ತಲೇ ಸ್ತಬ್ಧವಾಗುವುದು.. ಹೀಗೆ ಸಾವಿನ ಹತ್ತಾರು ಭಯಾನಕ ಸನ್ನಿವೇಶಗಳನ್ನು ನಾವು ನೋಡಿದ್ದೇವೆ. ಇದೀಗ ಮೈಸೂರಿನಲ್ಲಿ ಮೆಡಿಕಲ್‌ ಸ್ಟೋರ್‌ಗೆ  ಔಷಧ ತೆಗೆದುಕೊಳ್ಳಲೆಂದು ಬಂದ ವ್ಯಕ್ತಿ ಅಲ್ಲೇ ಕುಸಿದುಬಿದ್ದು ಪ್ರಾಣ ಕಳೆದುಕೊಂಡ ದಾರುಣ ಘಟನೆಯೊಂದು ನಡೆದಿದೆ. ಅದರ ದೃಶ್ಯಗಳು ಸಿಸಿ ಟಿವಿಯಲ್ಲಿ ದಾಖಲಾಗಿದೆ.

ಮೈಸೂರಿನ ಉದಯಗಿರಿ ಮೆಡಿಕಲ್ ಸ್ಟೋರ್‌ನಲ್ಲಿ ಘಟನೆ ನಡೆದಿದೆ. ಜಗದೀಶ್ (38) ಎಂಬವರೇ ಹೃದಯಾಘಾತದಿಂದ ಮೃತಪಟ್ಟವರು. ಅವರು ಔಷಧ ಕೊಳ್ಳಲೆಂದು ಮೆಡಿಕಲ್‌ ಸ್ಟೋರ್‌ಗೆ ಬಂದವರು ಅಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

 

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement