ಬೆಂಗಳೂರು : ಹೌದು ಕೇಂದ್ರ ಸರ್ಕಾರವು ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ನೀಟ್ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯಲು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಅನುಮೋದನೆ ನೀಡಿದೆ.
ಎಐಸಿಟಿಇ ಭಾರತೀಯ ಭಾಷೆಗಳಲ್ಲಿ ತಾಂತ್ರಿಕ ಶಿಕ್ಷಣ ಪ್ರೋತ್ಸಾಹಿಸುತ್ತಿದೆ. ಇಂಗ್ಲಿಷ್ನಲ್ಲಿ ಪಾವೀಣ್ಯ ಇಲ್ಲದವರು ಹಾಗೂ ಗ್ರಾಮೀಣ ಅಭ್ಯರ್ಥಿಗಳ ಅನುಕೂಲವಾಗುವಂತೆ ಪ್ರಾದೇಶಿಕ ಭಾಷೆಗಳಲ್ಲಿ ಜೆಇಇ, ನೀಟ್, ಇಂಜಿನಿಯರಿಂಗ್ ಪರೀಕ್ಷೆಗಳನ್ನು ನಡೆಸಲು ಸಿದ್ಧತೆ ನಡೆಸಿದೆ
ಜೆಇಇ ಮೇನ್,ನೀಟ್ ಬ್ಯಾಂಕಿಂಗ್ ಪರೀಕ್ಷೆ, ಯುಪಿಎಸ್ ಸಿ ಪರೀಕ್ಷೆ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಲಾಗಿದೆ. ಈ ಮೂಲಕ ಕನ್ನಡಿಗರಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ.