ಕನ್ನಡ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆ : ಎಲ್ಲ ಇಲಾಖೆಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯ

ಬೆಂಗಳೂರು : ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸಬೇಕು. ಈ ಸಂಬಂಧ ಕನ್ನಡ ಕಡ್ಡಾಯಗೊಳಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಆದೇಶಿಸಿದ್ದಾರೆ. ರಾಜ್ಯದಲ್ಲಿ ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022 ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ, 2024 ಜಾರಿಗೆ ಬಂದಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ರನ್ವಯ ಕನ್ನಡ ಭಾಷೆಯು ರಾಜ್ಯದ ಹಾಗೂ ಸ್ಥಳೀಯ ಪ್ರಾಧಿಕಾರದ ಅಧಿಕೃತ ಭಾಷೆ. ಎಲ್ಲ ಸರ್ಕಾರಿ ಇಲಾಖೆಗಳಲ್ಲಿ, ಆಯುಕ್ತಾಲಯ, ನಿರ್ದೇಶನಾಲಯ, ನಿಗಮ, ಮಂಡಳಿ, ಪ್ರಾಧಿಕಾರಗಳ ಆವರಣಗಳಲ್ಲಿನ ಹೆಸರು ಪದನಾಮ ಸೇವಾ ಅವಧಿಯ ನಾಮಫಲಕಗಳು ಮಾರ್ಗಗಳ ಸೂಚನಾ ಫಲಕಗಳು ಇನ್ನಿತರೆ ಯಾವುದೇ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವಂತೆ ಸೂಚನೆ ಕೊಟ್ಟಿದ್ದಾರೆ. ತೀರಾ ಅನಿವಾರ್ಯವಿದ್ದಲ್ಲಿ ಮಾತ್ರ ಕಡ್ಡಾಯವಾಗಿ ಕನ್ನಡ ಭಾಷೆ ಶೇ. 60 ರಷ್ಟು ನಾಮಫಲಕ ಮೇಲ್ಬಾಗದಲ್ಲಿರುವಂತೆ ಶೇ. 40 ರಷ್ಟು ಅಂಗ್ಲಭಾಷೆಯಲ್ಲಿ ಪ್ರದರ್ಶಿಸಲು ಅಗತ್ಯ ಕ್ರಮ ವಹಿಸುವಂತೆ ಸೂಚನೆ ಕೊಟ್ಟಿದ್ದಾರೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement