ಮಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಭರ್ಜರಿ ಭಾರೀ ಗಾಳಿ ಮಳೆ ಹಿನ್ನೆಲೆಯಲ್ಲಿ ಎರಡು ಜಿಲ್ಲೆಗಳಿಗೂ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಇಂದು( ಮೇ 21) ಹಾಗೂ ನಾಳೆ (ಮೇ.22) ರವರೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿಯುದ್ದಕ್ಕೂ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತದಿಂದ ಎಚ್ಚರಿಕೆ ನೀಡಲಾಗಿದೆ.
ಇನ್ನು ನಿನ್ನೆಯಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಇಂದು ಮುಂಜಾನೆಯಿಂದಲೇ ಹಲವು ಕಡೆಗಳಲ್ಲಿ ಮಳೆಯಾಗಿದೆ. ಹಾಗೂ ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದೆ.