ಬೆಂಗಳೂರು: ಕರ್ನಾಟಕದಲ್ಲಿ ಡೆಂಗ್ಯೂ ಪ್ರಕರಣಗಳು ಉಲ್ಬಣಗೊಂಡಿದ್ದು, 15 ಸಾವಿರದ ಗಡಿಯತ್ತ ಸಾಗುತ್ತಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಕರ್ನಾಟಕದಲ್ಲಿ ಡೆಂಗ್ಯೂ 14,955 ಪ್ರಕರಣಗಳು ದಾಖಲಾಗಿದ್ದು, ಒಂದು ತಿಂಗಳ ಅವಧಿಯಲ್ಲಿ 1,829 ಪ್ರಕರಣಗಳು ದೃಢಪಟ್ಟಿವೆ. ಈವರೆಗೆ ಕರ್ನಾಟಕದ 31 ಜಿಲ್ಲೆಗಳಿಂದ 7,282 ಪ್ರಕರಣಗಳು ದೃಢಪಟ್ಟಿದೆ.
ಇನ್ನು ಕರ್ನಾಟಕದಲ್ಲಿ ಈಗಾಗಲೇ ಎರಡು ಲಕ್ಷಕ್ಕೂ ಅಧಿಕ ಡೆಂಗ್ಯೂ ಜ್ವರ ಶಂಕಿತರ ತಪಾಸಣೆ ಮಾಡಲಾಗಿದ್ದು, ಕಳೆದ ವರ್ಷ ರಾಜ್ಯದಲ್ಲಿ 9,620 ಮಂದಿ ಡೆಂಗ್ಯೂ ಜ್ವರದಿಂದ ಬಳಲಿದ್ದರು ಎಂದು ವರದಿಯಾಗಿದೆ.