ಬೆಂಗಳೂರು; ಕರ್ನಾಟಕದಲ್ಲಿ ಹಿಂದಿ ಹೇರಿಕೆ ಸಮರ್ಥನೀಯವ.? ಈ ವಿಷಯಕ್ಕೆ ಸಂಬಂಧಿಸಿದಂತೆ ನಾಡಿನ ವಿಚಾರವಂತರು ಪಶ್ನೆ ಎತಿದ್ದಾರೆ.
ಏಕೆಂದರೆ ಕರ್ನಾಟಕದಲ್ಲಿ ವ್ಯವಹಾರ ವಹಿವಾಟು ನಡೆಸುತ್ತಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ಬಹುತೇಕ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ, ಖಾಸಗಿ ಬ್ಯಾಂಕುಗಳಲ್ಲಿ, ಅಂಚೆ ಕಚೇರಿಗಳಲ್ಲಿ ಹಾಗೂ ಜೀವವಿಮೆ ಕಚೇರಿಗಳಲ್ಲಿ ಕನ್ನಡವನ್ನು ಬಳಸದೆ ನಿರ್ಲಕ್ಷಿಸುತ್ತಿರುವುದು ಕಳವಳಕಾರಿಯಾಗಿದೆ.
ಇದಲ್ಲದೆ ಕನ್ನಡಕ್ಕೆ ಆದ್ಯತೆ ನೀಡುವ ಬದಲಾಗಿ ಹಿಂದಿ ಭಾಷೆಗೆ ಆದ್ಯತೆ ನೀಡುತ್ತಾ, ಹಿಂದಿಯನ್ನು ವ್ಯವಸ್ಥಿತವಾಗಿ ಹೇರುತ್ತಿರುವುದು ಆತಂಕ ಹುಟ್ಟಿಸುವ ಬೆಳವಣಿಗೆಯಾಗಿದೆ.
ಕರ್ನಾಟಕವು 65 ಮಿಲಿಯನ್‌ಗೂ ಹೆಚ್ಚಿನ ಜನಸಂಖ್ಯೆ ಹೊಂದಿದೆ. ಸಾವಿರಾರು ವರ್ಷಗಳ ಇತಿಹಾಸ, ಪರಂಪರೆ ಹೊಂದಿರುವ ಕನ್ನಡ ಭಾಷೆಯು ಇಂಡಿಯಾ ಒಕ್ಕೂಟದ ಸಾಂವಿಧಾನಿಕ ಮಾನ್ಯತೆಯನ್ನು ಹೊಂದಿದೆ. ಫೆಡರಲ್ ರಿಪಬ್ಲಿಕ್ ಆಫ್ ಇಂಡಿಯಾದ ಅಧಿಕೃತ ಭಾಷೆಗಳಲ್ಲಿ ಒಂದೆಂದು ಪರಿಗಣಿತವಾಗಿದೆ.
ಕರ್ನಾಟಕದ ಆಡಳಿತ ಭಾಷೆಯಾಗಿರುವ ಕನ್ನಡವನ್ನು ಕರ್ನಾಟಕದಲ್ಲೇ ಬಳಸದೆ ನೀವು ತಾತ್ಸಾರ ಮನೋಭಾವ ತೋರುತ್ತಿರುವುದನ್ನು ನಾವು ಖಂಡಿಸುತ್ತೇವೆ. ಬ್ಯಾಂಕುಗಳು ಅಂಚೆ ಕಚೇರಿ ಮುಂತಾದಡೆ ಚಲನ್‌ಗಳು, ಅರ್ಜಿ ಫಾರಂಗಳನ್ನು ಹಿಂದಿ, ಇಂಗ್ಲಿಷ್ ನಲ್ಲಿ ಮಾತ್ರ ವಿತರಿಸುವ ಮೂಲಕ ಕನ್ನಡದಲ್ಲಿ ಲಭ್ಯವಿರದಂತೆ ವ್ಯವಸ್ಥಿತವಾಗಿ ನೋಡಿಕೊಳ್ಳಲಾಗುತ್ತಿದೆ. ಎಟಿಎಂ ಕೇಂದ್ರಗಳಲ್ಲಿ ಕನ್ನಡ ಭಾಷೆಯನ್ನು ಆಯ್ಕೆ ಮಾಡಿಕೊಂಡು ಬಳಸಲು ಅವಕಾಶವಿರದಂತೆ ಕೇವಲ ಹಿಂದಿ, ಇಂಗ್ಲೀಷ್ ಭಾಷೆಯಲ್ಲಿರುವ ಎಟಿಎಂಗಳನ್ನು ಸ್ಥಾಪಿಸಲಾಗುತ್ತಿದೆ.
ಒಂದೆಡೆ ಕನ್ನಡವನ್ನು ನಿರ್ಲಕ್ಷಿಸಿ ಬದಿಗೆ ತಳ್ಳುವುದು, ಮತ್ತೊಂದೆಡೆ ಕನ್ನಡದ ಸ್ಥಾನವನ್ನು ಹಿಂದಿ ಆಕ್ರಮಿಸಿಕೊಳ್ಳುವಂತಹ ವಾತಾವರಣ ನಿರ್ಮಾಣವಾಗುತ್ತಿದ್ದು, ಅದಕ್ಕೆ ತಕ್ಕನಾಗಿ ಬ್ಯಾಂಕ್, ಅಂಚೆ ಕಚೇರಿಗಳು ಮತ್ತು ಕೇಂದ್ರ ಸರ್ಕಾರಿ ಸ್ವಾಮ್ಯದ ಕಚೇರಿಗಳು ವರ್ತಿಸುತ್ತಿರುವ ಬಗ್ಗೆ ಕರ್ನಾಟಕದಲ್ಲಿ ವ್ಯಾಪಕವಾದ ಅಸಮಾಧಾನ ಬೆಳೆಯುತ್ತಿದೆ ಎನ್ನುವುದನ್ನು ತಿಳಿಸಬಯಸುತ್ತೇವೆ.
ಕರ್ನಾಟಕದಲ್ಲಿ ಕನ್ನಡದಲ್ಲಿ ಸೇವೆ ಒದಗಿಸದೆ, ವ್ಯವಹರಿಸದೆ ಇರುವುದು ಮತ್ತು ಹಿಂದಿ ಹೇರಿಕೆ ಮಾಡುತ್ತಿರುವುದು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ಧಕ್ಕೆಯುಂಟು ಮಾಡಲಿದೆ. ಇದು ನಮ್ಮ ನಾಡಿನ ಕೋಟ್ಯಂತರ ಜನತೆಯ ಮೂಲಭೂತ ಹಕ್ಕುಗಳ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಆಗಿದೆ ಎಂದು ನಾವು ಭಾವಿಸುತ್ತೇವೆ.
ಹಾಗಾಗಿ ನಾಡಿನ ಕನ್ನಡಪರ ಹೋರಾಟಗಾರರು. ಇದೇ ಸೆ.13 ರಂದು ಕನ್ನಡ ಕಲಿಗಳು ಹಿಂದಿ ವಿರೋಧಿ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೋರಾಟ ಸಮಿತಿಯ ಸಂಚಾಲಕ ಪಾರ್ವತೀಶ ಬಿಳಿದಾಳೆ ಹೇಳಿಕೆ ನೀಡಿದ್ದಾರೆ.