ಬೆಂಗಳೂರು : ರಾಜ್ಯದಲ್ಲಿ 2023ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. 10 ಸಂಸ್ಥೆಗಳು ಹಾಗೂ ಕೊಪ್ಪಳದಲ್ಲಿ ಸರ್ಕಾರಿ ಶಾಲೆ ನಿರ್ಮಾಣಕ್ಕೆ ಭೂಮಿ ಕೊಟ್ಟ ಹುಚ್ಚಮ್ಮ, ಬೀದರ್‌ನ ಮಂಗಳಮುಖಿ ಸೇರಿದಂತೆ ಒಟ್ಟು 68 ಜನರನ್ನು ಆಯ್ಕೆ ಮಾಡಲಾಗಿದೆ. 1,157 ರಾಜ್ಯೋತ್ಸವ ಅರ್ಜಿ ಬಂದಿದ್ದವು. ಅಂತಿಮವಾಗಿ 68 ಪ್ರಶಸ್ತಿ ಆಯ್ಕೆ ಮಾಡಲಾಗಿದೆ. ಸುವರ್ಣ ಮಹೋತ್ಸವ ಪ್ರಯುಕ್ತ 10 ಸಂಘ ಸಂಸ್ಥೆಗಳು, 100 ವರ್ಷ ದಾಟಿದ ಇಬ್ಬರಿಗೆ ಪ್ರಶಸ್ತಿ ಹಾಗೂ ಬೀದರ್ ಜಿಲ್ಲೆಯ ಮಂಗಳಮುಖಿಗೆ ಪ್ರಶಸ್ತಿ ನೀಡಿಲು ಸರ್ಕಾರ ಪ್ರಕಟಿಸಿದೆ. ಚಂದ್ರನ ಅಂಗಳಕ್ಕೆ ಉಪಗ್ರಹವನ್ನು ಕಳುಹಿಸಿದ ಇಸ್ರೋ ಸಂಸ್ಥೆಯ ಮುಖ್ಯಸ್ಥ ಎಸ್. ಸೋಮನಾಥ್ ಸೇರಿದಂತೆ ವಿವಿಧ ಕ್ಷೇತ್ರಗಳಿಂದ ಸಾಧಕರನ್ನು ಆಯ್ಕೆ ಮಾಡಲಾಗಿದೆ. ರಾಜ್ಯೋತ್ಸವ ಪ್ರಶಸ್ತಿಯು 25 ಗ್ರಾಂ ಚಿನ್ನದ ಪದಕ ಹಾಗೂ 5 ಲಕ್ಷ ನಗದು ಒಳಗೊಂಡಿರುತ್ತದೆ. ಎಲ್ಲ ಅರ್ಹರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ನಾಳೆ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.