ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ಸಂಸ್ಥೆಯು 2975 ಕಿರಿಯ ಸ್ಟೇಶನ್ ಅಟೆಂಡಂಟ್, ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ವಿದ್ಯಾರ್ಹತೆ :10ನೇ, 12ನೇ ತರಗತಿ ಪಾಸಾಗಿರಬೇಕು. ಡಿಪ್ಲೋಮಾ, ಬಿ.ಇ ಅಥವಾ ಬಿ.ಟೆಕ್ ತೇರ್ಗಡೆಯಾಗಿರಬೇಕು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 21-ಅಕ್ಟೋಬರ್-2024ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-ನವೆಂಬರ್-2024
ಉದ್ಯೋಗ ಸ್ಥಳ – ಕರ್ನಾಟಕಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ವಯೋಮಿತಿ:ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಶನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ 2024 ನವೆಂಬರ್ 20ರಂತೆ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷವಾಗಿರಬೇಕು.KPTCL ವಯೋಮಾನ ಸಡಿಲಿಕೆ : ಎಸ್‌ಸಿ/ಎಸ್‌ಟಿ/ಕ್ಯಾಟ್-I ಅಭ್ಯರ್ಥಿಗಳು: 05 ವರ್ಷ ಸಡಿಲಿಕೆ. ಪ್ರವರ್ಗ -2ಎ/2ಬಿ/3ಎ & 3ಬಿ ಅಭ್ಯರ್ಥಿಗಳು: 03 ವರ್ಷ ಸಡಿಲಿಕೆ
ಅರ್ಜಿಯನ್ನು ಕಡ್ಡಾಯವಾಗಿ ಕವಿಪ್ರನಿನಿ ಅಥವಾ ವಿದ್ಯುತ್ ಸರಬರಾಜು ಕಂಪನಿಗಳ ಈ ಕೆಳಗೆ ತಿಳಿಸಿರುವ ಯಾವುದಾದರೊಂದು ವೆಬ್-ಸೈಟ್ ಮೂಲಕ ಸಲ್ಲಿಸಬಹುದಾಗಿರುತ್ತದೆ. ಇತರೆ ಯಾವುದೇ ವಿಧಾನದಲ್ಲಿ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ.
https://kptcl.karnataka.gov.inhttps://bescom.karnataka.gov.inhttps://cescmysore.karnataka.gov.inhttps://mescom.karnataka.gov.inhttps://hescom.karnataka.gov.inhttps://gescom.karnataka.gov.in
ಅರ್ಜಿ ಶುಲ್ಕ :ಅಂಗವಿಕಲ ಅಭ್ಯರ್ಥಿಗಳು: ಶೂನ್ಯ ಶುಲ್ಕ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು: ರೂ. 378 ಶುಲ್ಕ ಸಾಮಾನ್ಯ/ಪ್ರವರ್ಗ -2ಎ/2ಬಿ/3ಎ & 3ಬಿ ಅಭ್ಯರ್ಥಿಗಳು: ರೂ. 614 ಶುಲ್ಕ ಕಟ್ಟಬೇಕು
ವೇತನ ಶ್ರೇಣಿ:1ನೇ ವರ್ಷ: ರೂ. 17,000/-2ನೇ ವರ್ಷ: ರೂ. 19,000/-3ನೇ ವರ್ಷ: ರೂ. 21,000/-
ಆಯ್ಕೆಯ ವಿಧಾನ:ಅಭ್ಯರ್ಥಿಗಳಿಗೆ ಮೆರಿಟ್ ಪಟ್ಟಿ, ಕನ್ನಡ ಭಾಷಾ ಪರೀಕ್ಷೆ, ಆಪ್ಟಿಟ್ಯೂಡ್ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.