ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

 

ಚಿತ್ರದುರ್ಗ : ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದಿಂದ ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ (ಪ್ರವರ್ಗ-3ಬಿ) ಅಭಿವೃದ್ಧಿಗಾಗಿ 2024-25ನೇ ಸಾಲಿಗೆ ಅನಿಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಈ ನಿಗಮಡಿಯಲ್ಲಿ ಅನುಷ್ಟಾನಗೊಳಿಸುತ್ತಿರುವ ಬಸವ ಬೆಳಗು ಯೋಜನೆ, ಜೀವಜಲ ಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಬಿ ಸಾರಥಿ ಯೋಜನೆ( ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ) ಹಾಗೂ ಸ್ವಾತಂತ್ರ ಅಮೃತ ಮಹೋತ್ಸವದ ಮುನ್ನಡೆ ಯೋಜನೆ ಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

Advertisement

ವಿಶೇಷ ಸೂಚನೆ: ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು  ಜೋಡಣೆ ಮಾಡಿರಬೇಕು. ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್‌ಮಾಡಿಬೇಕು. ನಿಗಮವು ಅನುಷ್ಠಾನಗೊಳಿಸುವ ಈ ಮೇಲ್ಕಂಡ ಯೋಜನೆಗಳಲ್ಲಿ ಸರ್ಕಾರದ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರು ಸಹ ಆನ್ಲೆöÊನ್ ಮೂಲಕ ಅರ್ಜಿ ಸಲ್ಲಸಬಹುದು. ಒಂದು ಕಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.

ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ನಾಗರೀಕ ಸೇವಾ ಕೇಂದ್ರಗಳಲ್ಲಿ ದಾಖಲಾತಿಗಳೊಂದಿಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕಾಗಿರುತ್ತದೆ.

ಆಧಾರ್ ಕಾರ್ಡನಲ್ಲಿರುವಂತೆ ಅರ್ಜಿದಾರರ ಹೆಸರು, ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು. ನಿಗಮದ ಯೋಜನೆಗಳಲ್ಲಿ ಒಂದು ಬಾರಿ ಯಾವುದಾದರು ಯೋಜನೆಯ ಪ್ರಯೋಜನೆ ಪಡೆದಿದ್ದಲ್ಲಿ ಅಂತಹವರು ಹಾಗೂ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿತರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ  https://kvldcl.karnataka.gov.in    ಅಥವಾ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯ ದೂರವಾಣಿ ಸಂಖ್ಯೆ 08194-220882 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಹೆಚ್.ಶಿಲ್ಪಾ ತಿಳಿಸಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement