ಚಂಡೀಗಡ: ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ತರ್ಲೋಚನ್ ಸಿಂಗ್ ಅವರನ್ನು ಸೋಲಿಸುವ ಮೂಲಕ ಹರ್ಯಾಣ ಸಿಎಂ ನಯಾಬ್ ಸಿಂಗ್ ಸೈನಿ ಕರ್ನಾಲ್ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಿಧಾನಸಭೆ ಸ್ಪೀಕರ್ ಗಿಯಾನ್ ಚಂದ್ ಗುಪ್ತಾ ಅವರು ಬಿಜೆಪಿ ನಾಯಕರಿಗೆ ತಮ್ಮ ಚೇಂಬರ್ನಲ್ಲಿ ಪ್ರಮಾಣ ವಚನ ಬೋಧಿಸಿದರು. ಕರ್ನಾಲ್ ಸ್ಥಾನವನ್ನು ಈ ಹಿಂದೆ ಸೈನಿ ಅವರ ಸಹೋದ್ಯೋಗಿ ಮನೋಹರ್ ಲಾಲ್ ಖಟ್ಟರ್ ಹೊಂದಿದ್ದರು. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಖಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ನಯಾಬ್ ಸಿಂಗ್ ಸೈನಿ ಗೆಲುವು ದಾಖಲಿಸಿದ್ದಾರೆ.