ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಕಲ್ಲಿದ್ದಲು ಗಣಿಯಲ್ಲಿ ಸೋಮವಾರ ಭಾರಿ ಸ್ಫೋಟ ಸಂಭವಿಸಿದ್ದು, ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಮೂಲಗಳ ಪ್ರಕಾರ, ಕಲ್ಲಿದ್ದಲು ಪುಡಿ ಮಾಡುವ ಪ್ರಕ್ರಿಯೆಯಲ್ಲಿ ಬಿರ್ಭೂಮ್‌ನ ಲೋಕಪುರ ಪ್ರದೇಶದಲ್ಲಿ ನೆಲೆಗೊಂಡಿರುವ ಗಂಗಾರಾಮ್‌ಚಕ್ ಮೈನಿಂಗ್ ಪ್ರೈವೇಟ್ ಲಿಮಿಟೆಡ್ ಕಾಲೇರಿಯಲ್ಲಿ ಭಾರಿ ಸ್ಫೋಟ ಸಂಭವಿಸಿದೆ.
