ಕೇರಳ: ಕೊಚ್ಚಿಯ ಕಳಮಶೇರಿಯಲ್ಲಿನ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸ್ಪೋಟದಲ್ಲಿ ಐಇಡಿ (ಸುಧಾರಿತ ಸ್ಫೋಟಕ ಸಾಧನಗಳು) ಬಳಸಲಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ ಎಂದು ಕೇರಳ ಡಿಜಿಪಿ ಶೇಕ್ ದರ್ವೇಶ್ ಸಾಹೇಬ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಘಟನೆಯಲ್ಲಿ ಸುಮಾರು 36 ಗಾಯಾಳುಗಳು ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿಜಿಪಿ ಮಾಹಿತಿ ನೀಡಿದ್ದಾರೆ.
ನಾವು ಕೂಲಂಕುಷವಾಗಿ ತನಿಖೆ ನಡೆಸಲಿದ್ದು, ಘಟನೆಯ ಹಿಂದೆ ಯಾರ ಕೈವಾಡವಿದೆ ಎಂದು ಶೀಘ್ರ ಕಂಡುಹಿಡಿಯುತ್ತೇವೆ ಎಂದು ಡಿಜಿಪಿ ತಿಳಿಸಿದ್ದಾರೆ.
ಈ ಬೆಳೆವಣಿಗೆಗಳ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತು ಎನ್‌ಎಸ್‌ಜಿ ಟೀಂ ಕೇರಳಕ್ಕೆ ಧಾವಿಸಿ ಘಟನೆಯ ತನಿಖೆಯನ್ನು ಪ್ರಾರಂಭಿಸುವಂತೆ ಸೂಚಿಸಿದ್ದಾರೆ.