ಕಾಂಗ್ರೆಸ್‌ನಲ್ಲಿ ಯಾರು ಸಿಎಂ ಆಗಬೇಕು ಎಂದು ಮ್ಯೂಸಿಕಲ್ ಚೇರ್ ನಂತೆ ಸ್ಪರ್ಧೆ – ಆರ್ ಅಶೋಕ್ ವ್ಯಂಗ್ಯ

WhatsApp
Telegram
Facebook
Twitter
LinkedIn

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಯಾರು ಸಿಎಂ ಆಗಬೇಕೆಂದು ಮ್ಯೂಸಿಕಲ್ ಚೇರ್‌ನಂತೆ ಸ್ಪರ್ಧೆ ನಡೆಯುತ್ತಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಬಿಜೆಪಿ ಎಂದಿಗೂ ಸರ್ಕಾರ ಬೀಳಿಸುವ ಪ್ರಯತ್ನ ಮಾಡಿಲ್ಲ. ಅಂತಹ ಅವಶ್ಯಕತೆ ನಮಗಿಲ್ಲ ಎಂದಿದ್ದಾರೆ. ಅಲ್ದೇ ಕಾಂಗ್ರೆಸ್ ಪಕ್ಷದಲ್ಲಿ ಯಾರು ಸಿಎಂ ಆಗಬೇಕೆಂದು ಮ್ಯೂಸಿಕಲ್ ಚೇರ್ ನಂತೆ ಸ್ಪರ್ಧೆ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ ಹೀಗೆ ಎಲ್ಲರೂ ಮುಖ್ಯಮಂತ್ರಿ ಆಗುತ್ತಾರೆ ಎಂಬ ಮಾತು ಕೇಳಿಬರುತ್ತಿದೆ. ಕಾಂಗ್ರೆಸ್ ಶಾಸಕರಲ್ಲೇ ಈ ವಿಷಯ ಬಹಳ ಚರ್ಚೆಯಾಗುತ್ತಿದೆ ಎಂದರು. ಇದೇ ವೇಳೆ ಡಿಕೆಶಿ ವಿರುದ್ಧದ ಹರಿಹಾಯ್ದ ಆರ್ ಅಶೋಕ್, ಲೋಕಸಭೆ ಚುನಾವಣೆಯಲ್ಲಿ ಸೋತ ಕೂಡಲೇ, ಜನರಿಗೆ ನಿಯತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ನಿಂದಿಸುತ್ತಿದ್ದಾರೆ. ಬೆಂಗಳೂರಿನ ಜನರನ್ನು ಕಾಂಗ್ರೆಸ್ ನಾಯಕರು ಹೀಯಾಳಿಸಿ ಮಾತಾಡುತ್ತಾರೆ. ಬೆಂಗಳೂರಿನ ಜನರ ಬಗ್ಗೆ ಮಾತಾಡುವ ನೈತಿಕತೆ ಅವರಿಗಿಲ್ಲ. ಜನರಿಗೆ ಕುಡಿಯುವ ನೀರು ನೀಡುವುದು ಸರ್ಕಾರದ ಕರ್ತವ್ಯ. ಹೀಗೆ ಮಾತಾಡಿದ್ದಕ್ಕೆ ಕಾಂಗ್ರೆಸ್ ಬೆಂಗಳೂರು ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

BC Suddi   About Us
For Feedback - [email protected]

Related News

LATEST Post

WhatsApp Icon Telegram Icon