ಬೆಂಗಳೂರು: ರಾಜ್ಯಕ್ಕೆ ಸಂಬಂಧಿಸಿದಂತೆ ಯಾವುದೇ ಅನುದಾನವನ್ನೂ ಕೇಂದ್ರ ಸರ್ಕಾರ ತಡೆಹಿಡಿದಿಲ್ಲ. ಸಕಾಲದಲ್ಲೇ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ನಗರದಲ್ಲಿ ಥಿಂಕರ್ಸ್ ಫೋರಂ ಭಾನುವಾರ ಆಯೋಜಿಸಿದ್ದ ಸಂವಾದದಲ್ಲಿ ಅವರು ಮಾತನಾಡಿದರು. ಯುಪಿಎ ಸರ್ಕಾರದ ಆಡಳಿತಕ್ಕೆ ಹೋಲಿಸಿದರೆ ರಾಜ್ಯಗಳಿಗೆ ನೀಡಲಾಗುತ್ತಿರುವ ತೆರಿಗೆ ಪಾಲು ಹಾಗೂ ಅನುದಾನವನ್ನು ಬಿಜೆಪಿ ಸರ್ಕಾರ ಹೆಚ್ಚಿಸಿದೆ ಎಂದು ಹೇಳಿದರು.
2004ರಿಂದ 2014ರ ಯುಪಿಎ ಆಡಳಿತದ ಅವಧಿಯಲ್ಲಿ ಕರ್ನಾಟಕಕ್ಕೆ ₹81,795 ಕೋಟಿ ಅನುದಾನ ಸಿಕ್ಕಿತ್ತು. ಅದೇ ಬಿಜೆಪಿ ಅವಧಿಯಲ್ಲಿ ₹2,93,226 ಕೋಟಿ ಲಭಿಸಿದೆ. ಕರ್ನಾಟಕಕ್ಕೆ ಮುಂಗಡವಾಗಿ ಹಣವನ್ನೂ ಬಿಡುಗಡೆ ಮಾಡಲಾಗಿದೆ. ಅನುದಾನ ಬಿಡುಗಡೆ ಮಾಡಿರುವುದಕ್ಕೆ ದಾಖಲೆಗಳಿವೆ. ಆದರೆ, ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರ, ಸುಳ್ಳು ಆರೋಪ ಮಾಡುತ್ತಿದೆ. ರಾಜ್ಯದ ಜನರನ್ನು ಕಾಂಗ್ರೆಸ್ ದಿಕ್ಕು ತಪ್ಪಿಸುತ್ತಿದೆ ಎಂದರು.