ನವದೆಹಲಿ: ವಿದೇಶಿ ಸಂಖ್ಯೆಯಿಂದ ಬೆದರಿಕೆ ಸಂದೇಶ ಬಂದ ನಂತರ ಕುಸ್ತಿಪಟು-ರಾಜಕಾರಣಿ ಬಜರಂಗ್ ಪುನಿಯಾ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಕಾಂಗ್ರೆಸ್ ತೊರೆಯದಿದ್ದರೆ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಅಂತ ಸಂದೇಶದಲ್ಲಿ ತಿಳಿಸಲಾಗಿದೆ ಎಂದು ವರದಿಯಾಗಿದೆ. “ಕಾನೂನು ಕ್ರಮ ಜಾರಿಯಲ್ಲಿದೆ. ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆ ಹಾಕಿದ್ದಾನೆ” ಎಂದು ಪೊಲೀಸರು ತಿಳಿಸಿದ್ದಾರೆ. ಹರಿಯಾಣ ಚುನಾವಣೆಗೂ ಮುನ್ನ ಪುನಿಯಾ ಮತ್ತು ವಿನೇಶ್ ಫೋಗಟ್ ಶುಕ್ರವಾರ ಕಾಂಗ್ರೆಸ್ ಸೇರಿದರು.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.