ಉಡುಪಿ: ಸದಾ ಕಾಂಗ್ರೇಸ್ ವಿರುದ್ದ ಮುಸ್ಲಿಂ ರ ವಿರುದ್ದ ತನ್ನ ಭಾಷಣದಲ್ಲಿ ಕಿಡಿಕಾರುತ್ತಿದ್ದ ಹಿಂದೂ ನಾಯಕಿ ಚೈತ್ರಾ ಕುಂದಪುರ ವಂಚನೆ ಪ್ರಕರಣದಲ್ಲಿ ತಪ್ಪಿಸಿಕೊಳ್ಳಲು ಆಶ್ರಯ ಪಡೆದಿದ್ದು, ಕಾಂಗ್ರೇಸ್ ನ ವಕ್ತಾರೆ ಮನೆಯಲ್ಲಿ ಎನ್ನುವ ಮಾಹಿತಿ ಇದೀಗ ಬಂದಿದ್ದು, ಇದೀಗ ಆರೋಪಿಗೆ ಆಶ್ರಯ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಕಾಂಗ್ರೆಸ್ ಮಾಧ್ಯಮ ವಕ್ತಾರೆ ಅಂಜುಂಗೆ ಸಿಸಿಬಿ ನೋಟಿಸ್ ನೀಡಿದೆ.
ಚೈತ್ರಾ ಕುಂದಾಪುರ ತನ್ನ ಸಂಗಡಿಗರೊಂದಿಗೆ ಸೇರಿಕೊಂಡು ಬೈಂದೂರಿನ ಉದ್ಯಮಿಯೊಬ್ಬರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ 7 ಕೋಟಿ ರೂ. ವಂಚನೆ ಮಾಡಿದ್ದರು ಎಂಬ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.ಈ ಕುರಿತು ಉದ್ಯಮಿ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಚೈತ್ರಾಗೆ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಮಾಧ್ಯಮ ವಕ್ತಾರೆ ಅಂಜುಂ ಎನ್ನುವರ ನಿವಾಸದಲ್ಲಿ ಅವಿತುಕೊಂಡಿದ್ದರು ಎಂದು ತಿಳಿದುಬಂದಿದ್ದು, ಇದೀಗ ಚೈತ್ರಾಗೆ ಆಶ್ರಯ ನೀಡಿದ್ದ ಅಂಜುಂಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ. ಇದರಿಂದ ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಕಾಂಗ್ರೆಸ್ ಮಾಧ್ಯಮ ವಕ್ತಾರೆ ಅಂಜುಂಗೆ ಸಂಕಷ್ಟ ಎದುರಾಗಿದೆ.
ಅಂಜುಮ್ ಚೈತ್ರಾಳ ಸ್ನೇಹಿತೆಯಾಗಿದ್ದು ಈ ಹಿಂದೆ ಇಬ್ಬರು ಸಹೋದ್ಯೋಗಿಯಾಗಿದ್ದರು. ಆರೋಪಿಗೆ ಆಶ್ರಯ ನೀಡಿದ ವಿಚಾರವಾಗಿ ಅಂಜುಮ್ ಅವರಿಗೆ ಸಿಸಿಬಿ ಈಗ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.