ಉತ್ತರ ಕನ್ನಡ: ಉತ್ತರ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ, ಕಾರವಾರ ವಿವಿಧ ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು 19/7/2024 ರಾತ್ರಿ 11.59.
ಉತ್ತರ ಕನ್ನಡ ಕಾರವಾರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಬೆರಳಚ್ಚುಗಾರ ವೃಂದದ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಕುರಿತು ಎಂಬ ವಿಷಯವನ್ನು ನೇಮಕಾತಿ ಅಧಿಸೂಚನೆ ಒಳಗೊಂಡಿದೆ.
ಒಟ್ಟು 3 ಬೆರಳಚ್ಚುಗಾರ (Typist) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ 21,400-42,000 ರೂ. ಹಾಗೂ ಲಭ್ಯವಿರುವ ಇತರ ಭತ್ಯೆಗಳು.
ವಿದ್ಯಾರ್ಹತೆ ಮಾಹಿತಿ: ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಕಮರ್ಷಿಯಲ್ ಪ್ರಾಕ್ಟೀಸ್‌ನಲ್ಲಿ ಮೂರು ವರ್ಷಗಳ ಡಿಪ್ಲೋಮಾ (Three years Diploma in Commercial Practice) ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗಾಗಿ ಹೊಂದಿರಬೇಕು.
ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಪ್ರೌಢದರ್ಜೆ ಬೆರಳಚ್ಚು (Senior Grade Typewriting) ಪರೀಕ್ಷೆಯಲ್ಲಿ ಅಥವಾ ಸೆಕ್ರೆಟರಿಯಲ್ ಪ್ರಾಕ್ಟೀಸ್ ಡಿಪ್ಲೋಮಾ (Diploma in Secretarial Practice) ಪರೀಕ್ಷೆಯಲ್ಲಿ ಉತ್ತಿರರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗಾಗಿ ಹೊಂದಿರಬೇಕು.
ಕಛೇರಿ ಕಾರ್ಯಕಲಾಪಗಳಿಗೆ ಸಂಬಂಧಿಸಿದಂತೆ ಗಣಕಯಂತ್ರದ (ಕಂಪ್ಯೂಟರ್) ಜ್ಞಾನ ಅವಶ್ಯಕವಾಗಿರುತ್ತದೆ.
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಕೆ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ ಮೀರಿರಬಾರದು. ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ 35 ವರ್ಷಗಳು. ಪ್ರವರ್ಗ 2ಎ, 3ಎ ಹಾಗೂ 3 ಬಿ ಅಭ್ಯರ್ಥಿಗಳಿಗೆ 38 ವರ್ಷಗಳು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕು. ಶುಲ್ಕ ಪಾವತಿ ಮಾಡದ ಅರ್ಜಿಗಳನ್ನು ಯಾವುದೇ ಕಾರಣ ನೀಡದೇ ತಿರಸ್ಕಾರ ಮಾಡಲಾಗುತ್ತದೆ. ಅರ್ಜಿ ಶುಲ್ಕ ಪಾವತಿ ಮಾಡಲು 20/7/2024 ಕೊನೆಯ ದಿನವಾಗಿರುತ್ತದೆ.
ಆಸಕ್ತ ಮತ್ತು ಅರ್ಹರು ನೇಮಕಾತಿ ಅಧಿಸೂಚನೆ, ಅರ್ಜಿ ಸಲ್ಲಿಕೆ ಮಾಡಲು https://uttarakannada.dcourts.gov.in/online-recruitment ವೆಬ್ ಸೈಟ್‌ಗೆ ಭೇಟಿ ನೀಡಬಹುದು.