ಕಾರ್ಮಿಕರಿಗೆ ಇಲ್ಲಿದೆ ಗುಡ್ ನ್ಯೂಸ್.! ಈ ಕಾರ್ಡ್ ಇದ್ರೆ 2 ಲಕ್ಷ ವಿಮೆ.!

 

ಬೆಂಗಳೂರು : ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಅಸಂಘಟಿತ ಕಾರ್ಮಿಕರ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ, ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಸಂಗ್ರಹಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸಿ ಈಗಾಗಲೇ ಚಾಲನೆ ನೀಡಲಾಗಿದೆ.

ಅಸಂಘಟಿತ ಕಾರ್ಮಿಕರಿಗೆ ವಿಶೇಷ ನೀತಿಗಳು ಹಾಗೂ ಯೋಜನೆಗಳನ್ನು ರೂಪಿಸಲು ಕೇಂದ್ರ ಸರ್ಕಾರವು ಇ-ಶ್ರಮ್ ಯೋಜನೆ ಜಾರಿಗೊಳಿಸಿದೆ.

Advertisement

ಕೇಂದ್ರ ಸರ್ಕಾರವು ಗುರುತಿಸಿರುವ ಸುಮಾರು 379 ವರ್ಗಗಳ ಕಾರ್ಮಿಕರು ಹಾಗೂ ಪಟ್ಟಿಯಲ್ಲಿ ಸೇರಿರದ ಅಸಂಘಟಿತ ಕಾರ್ಮಿಕರು “ಇತರೆ ವರ್ಗ”ಗಳಡಿ ನೋಂದಣಿಯಾಗಬಹುದಾಗಿದೆ.

ನೋಂದಣಿಯ ಪ್ರಯೋಜನಗಳು

ಸಾಮಾಜಿಕ ಭದ್ರತೆ ಹಗೂ ಕಲ್ಯಾಣ ಯೋಜನೆಗಳನ್ನು ಪಡೆಯಲು. ದತ್ತಾಂಶವು ಸರ್ಕಾರಕ್ಕೆ ಅಸಂಘಟಿತ ಕಾರ್ಮಿಕರಿಗೆ ವಿಶೇಷ ನೀತಿಗಳು ಹಾಗೂ ಯೋಜನೆಗಳನ್ನು ರೂಪಿಸಲು ಸಹಾಯಕ ಒಂದು ವರ್ಷದ ಅವಧಿಗೆ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ ಪ್ರಯೋಜನ ಪಡೆಯಬಹುದು (ಅಪಘಾತದಿಂದ ಮರಣ ಹೊಂದಿದಲ್ಲಿ ಅಥವಾ ಶಾಶ್ವತ ದುರ್ಬಲತೆ ಹೊಂದಿದಲ್ಲಿ ರೂ.2 ಲಕ್ಷ ಹಾಗೂ ಭಾಗಶಃ ಅಂಗವೈಕಲ್ಯಕ್ಕೆ ರೂ.1 ಲಕ್ಷ ಪರಿಹಾರ) ರಾಷ್ಟ್ರೀಯ ವಿಪತ್ತು ಅಥವಾ ಕೋವಿಡ್-19ರ ಸಾಂಕ್ರಾಮಿಕ ಪಿಡುಗಿನಂತಹ ಪರಿಸ್ಥಿತಿಯಲ್ಲಿ ಅರ್ಹ ಕಾರ್ಮಿಕರಿಗೆ ನೆರವು ನೀಡಲು ದತ್ತಾಂಶ ಬಳಸಿಕೊಳ್ಳಬಹುದಾಗಿದೆ.

ನೋಂದಣಿಗೆ ಅರ್ಹತೆ

16 ರಿಂದ 59 ವಯೋಮಾನದವರು ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಭವಿಷ್ಯನಿಧಿ ಹಾಗೂ ಇ.ಎಸ್.ಐ ಫಲನುಭವಿಯಾಗಿರಬಾರದು. ಅವಶ್ಯಕ ದಾಖಲೆಗಳು:-ಆಧಾರ್ ಕಾರ್ಡ್. ಆಧಾರ್ ಕಾರ್ಡ್ ಸಂಖ್ಯೆಗೆ ಜೋಡಣೆಯಾದ ಮೊಬೈಲ್ ಸಂಖ್ಯೆ ಬ್ಯಾಂಕ್ ಖಾತೆ ವಿವರಗಳು.

ನೋಂದಣಿ ವಿಧಾನ

ಇ-ಶ್ರಮ್ ಪೋರ್ಟಲ್ www.eshram.gov.in ನಲ್ಲಿ ಸ್ವಯಂ ನೋಂದಣಿ ಅಥವಾ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ನವೆಂಬರ್ ಅಂತ್ಯದವರೆಗೆ ನೋಂದಣಿ ಮಾಡಿಸಿಕೊಳ್ಳಬಹುದು.

 

ಇ-ಶ್ರಮ್ ಪೋರ್ಟಲ್‍ನಲ್ಲಿ ನೋಂದಣಿಯು ಉಚಿತವಾಗಿದ್ದು, ಯಶಸ್ವಿ ನೋಂದಣಿಯ ನಂತರ ಫಲಾನುಭವಿಗಳು ಸ್ಥಳದಲ್ಲಿಯೇ ಗುರುತಿನ ಚೀಟಿಯನ್ನು ಪಡೆಯಬಹುದಾಗಿದೆ. ಇದು ದೇಶದಾದ್ಯಂತ ಹಾಗೂ ಜೀವಿತಾವಧಿಯ ಮಾನ್ಯತೆ ಹೊಂದಿದೆ.

ಹೆಚ್ಚಿನ ಮಾಹಿತಿಗೆ ಕಾರ್ಮಿಕ ಸಹಾಯವಾಣಿ 155214, ಇ-ಶ್ರಮ್ ಸಹಾಯವಾಣಿ 14434 (ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 8 ರಿಂದ ರಾತ್ರಿ 8 ರವರೆಗೆ ದೂರುಗಳನ್ನು ಸಲ್ಲಿಸಲು URL:www.gms.eshram.gov.in ಗೆ ಭೇಟಿ ನೀಡುವುದು. ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳ ಮಾಹಿತಿಯನ್ನು ಪಡೆಯಲು https://findmycsc.nic.in/csc/ ವೀಕ್ಷಿಸಬಹುದು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement