ಕಿತ್ತೂರು: ವೀರ ರಾಣಿ ಕಿತ್ತೂರು ಚನ್ನಮ್ಮಾಜಿ ಉತ್ಸವಕ್ಕೆ ಸರ್ಕಾರ 2 ಕೋಟಿ ಅನುದಾನ ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಶಾಸಕ ಬಾಬಾಸಾಹೇಬ್ ಪಾಟೀಲ್ ಸರ್ಕಾದ ಮೇಲೆ ಸತತವಾಗಿ ಒತ್ತಡ ಹಾಕಿದ ಪರಿಣಾಮ ಈಗ 2 ಕೋಟಿ ಅನುದಾನವನ್ನು ಘೋಷಣೆ ಮಾಡಿದೆ. ಜಿಲ್ಲಾಧಿಕಾರಿ ಅವರು ಉತ್ಸವಕ್ಕೆ 5 ಕೋಟಿ ಅನುದಾನ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದರು. ಆದರೆ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ 3 ಕೋಟಿ ಅನುದಾನ ಸರ್ಕಾರ ನೀಡುತ್ತದೆ ಎಂದು ಭರವಸೆ ನೀಡಿದರು. ಆದರೆ ಈಗ 2 ಕೋಟಿ ಅನುದಾನ ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.