‘ಕುಮಾರಣ್ಣ ಯಾವ ತಿಮಿಂಗಲವನ್ನಾದರೂ ಹಿಡಿಯಲಿ, ನುಂಗಿಕೊಳ್ಳಲಿ’- ಡಿ.ಕೆ.ಶಿ ತಿರುಗೇಟು

ಬೆಂಗಳೂರು: ಪೆನ್ ಡ್ರೈವ್ ಪ್ರಕರಣದಲ್ಲಿ ಕುಮಾರಣ್ಣ ಯಾವ ತಿಮಿಂಗಲವನ್ನಾದರೂ ಹಿಡಿಯಲಿ , ಬಡಿದು ಅವರೇ ನುಂಗಿಕೊಳ್ಳಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಪೆನ್ ಡ್ರೈವ್ ಪ್ರಕರಣದ ಹಿಂದೆ ದೊಡ್ಡ ತಿಮಿಂಗಲವಿದೆ ಎಂಬ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾ ಮಿ ಹೇಳಿಕೆ ಕುರಿತು ತಿರುಗೇಟು ನೀಡಿದ ಅವರು, ಯಾರನ್ನು ಹಿಡಿದು ಬಡಿದು ಒಳಗೆ ಹಾಕಬೇಕು ಅನ್ನಿಸುತ್ತದೋ ಅವರನ್ನು ಒಳಗೆ ಹಾಕಿಸಲಿ. ತಿಮಿಂಗಲಗಳನ್ನು ಅವರೇ ನುಂಗಿಕೊಳ್ಳಲಿ. ನಾನು ನಿರ್ದೇಶಕನೂ ಅಲ್ಲ , ನಿರ್ಮಾಪಕನೂ ಅಲ್ಲ . ನಾನು ಕೇವಲ ಪ್ರದರ್ಶಕ ಅಷ್ಟೇ ಎಂದರು.

ಶಾಸಕರು, ಸಚಿವರಿಂದ ಮಾತನಾಡಿಸುತ್ತಿರುವವರು ಯಾರು ಎಂಬ ಕುಮಾರಸ್ವಾಮಿ ಪ್ರಶ್ನೆಗೆ ಬೇರೆಯವರಿಂದ ಮಾತನಾಡಿಸುವ, ಪ್ರತಿಭಟನೆ ಮಾಡಿಸುವ, ಬೇರೆಯವರ ಮೇಲೆ ಅನಗತ್ಯ ಆರೋಪ ಮಾಡುವ ಅಗತ್ಯ ನನಗಿಲ್ಲ ಎಂದು ಹೇಳಿದರು.

ರಾಜಕೀಯ ಪಕ್ಷದ ಅಧ್ಯಕ್ಷನಾದ ನಾನು ಚುನಾವಣಾ ಪ್ರಚಾರದಲ್ಲಿ ನಿರತನಾಗಿದ್ಧೇನೆ. ಈ ಪ್ರಕರಣದಲ್ಲಿ ಒಂದು ಸಣ್ಣ ಹಸ್ತಕ್ಷೇಪವಿದ್ದರೂ ಅದಕ್ಕೆ ಬೆಲೆ ತೆರಲು ನಾನು ಸಿದ್ಧ ಈಗ ಆ ವಿಚಾರವಾಗಿ ಮಾತನಾಡುವುದಿಲ್ಲ . ಸಮಯ ಎಲ್ಲದಕ್ಕೂ ಉತ್ತರ ನೀಡಲಿದೆ ಎಂದರು.

Advertisement

ದೇವೇಗೌಡರ ಕುಟುಂಬಕ್ಕೆ ಕಳಂಕ ತರಲು ರೇವಣ್ಣ ಅವರನ್ನು ಬಂಧಿಸಲಾಗಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ, ರೇವಣ್ಣ ಅವರ ಪರಿಸ್ಥಿತಿ ನೋಡಿ ನನಗೂ ಬೇಸರವಾಗುತ್ತಿದೆ ಎಂದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement