ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ನಂತರ ಕರ್ನಾಟಕ ರಾಜ್ಯಪಾಲ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತ್ತು ಕಾಂಗ್ರೆಸ್ ಸರ್ಕಾರದ ನಡುವಿನ ಹಾವು ಮುಂಗುಸಿ ಜಗಳ ಮುಂದುವರೆದಿದೆ. ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರದ ಪ್ರಕರಣಗಳ ವರದಿ ಕೇಳಿದ್ದ ರಾಜ್ಯಪಾಲರಿಗೆ ಇದೀಗ ಸಚಿವ ಸಂಪುಟ ಸಭೆಯ ಮೂಲಕ ಮತ್ತೊಂದು ಟಕ್ಕರ್ ನೀಡಿದ್ದಾರೆ. ಕಲ್ಯಾಣ ಕರ್ನಾಟಕದ ಕಲಬುರಗಿಯಲ್ಲಿ ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರ ಇತ್ತೀಚಿನ ನಡೆ ಸರಿಯಾದುದಲ್ಲ. ಅನಗತ್ಯವಾಗಿ ಪತ್ರ ಬರೆದು ವಿವರಣೆ ಕೇಳುತ್ತಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ವಿವರಣೆ ಕೇಳಿ ಪತ್ರ ಬರೆದಿದ್ದಾರೆ. ರಾಜ್ಯಪಾಲರ ಈ ನಡೆ ಸರಿಯಾದುದಲ್ಲ. ಸರ್ಕಾರದ ವಿರುದ್ಧ ಗೊಂದಲ ಸೃಷ್ಟಿಯಾಗುವಂತೆ ಮಾಡುತ್ತಿದ್ದಾರೆ. ಬಿಜೆಪಿಯ ಅಣತಿಯಂತೆ ಕೆಲಸ ಮಾಡುತ್ತಿದ್ದಾರೆಂದು ರಾಜ್ಯಪಾಲರ ವಿರುದ್ಧ ಸಚಿವರು ಕಿಡಿ ಕಾರಿದರು. ಅಷ್ಟೇ ಅಲ್ಲದೆ, ಕುಲಪತಿ ನೇಮಕದ ನಿರ್ಧಾರವನ್ನು ರಾಜ್ಯ ಸರ್ಕಾರ ತನ್ನ ಸುಪರ್ದಿಗೆ ಪಡೆಯುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿ ನೇಮಕದ ತೀರ್ಮಾನ ಕೈಗೊಳ್ಳಲಾಯಿತು. ಈ ಮೂಲಕ ಇದುವರೆಗೂ ರಾಜ್ಯಪಾಲರಿಗೆ ಇದ್ದ ಅಧಿಕಾರವನ್ನು ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಂಡಂತಾಗಿದೆ. ಈ ಮೂಲಕ ರಾಜ್ಯಪಾಲರಿಗೆ ತಿರುಗೇಟು ನೀಡಿದೆ. ‘ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾಲಯ ತಿದ್ದುಪಡಿ ವಿಧೇಯಕ 2024’ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿತು. ಇದರಿಂದ ಕುಲಪತಿ ನೇಮಕ ಮಾಡಲು ರಾಜ್ಯ ಸರ್ಕಾರಕ್ಕೇ ಅವಕಾಶ ದೊರೆಯುತ್ತದೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ